ಬಿ.ಸಿ.ರೋಡ್ : ಸಿ.ಸಿ. ಕ್ಯಾಮರಾ ಅಳವಡಿಸಲು ತಾ.ಪಂ ಮನವಿ

0

ಬಂಟ್ವಾಳ: ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೆಲ್ಕಾರ್ ನಿಂದ ಪುತ್ರೊಟ್ಟಿಬೈಲ್ ಹಾಗೂ ನೆಹರುನಗರ ಜಂಕ್ಷನ್‌ಗಳಲ್ಲಿ ಸಂಚಾರ ದಟ್ಟಣೆ ಮತ್ತು ಅವಘಡಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಅಲ್ಲಿ ಸಿ.ಸಿ. ಕ್ಯಾಮರಾಗಳನ್ನು ಅಳವಡಿಸುವಂತೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ನಿರ್ದೇಶಕರಿಗೆ ಜು.16 ರಂದು ಪತ್ರ ಬರೆದಿರುವ ತಾ.ಪಂ ಇಒ, ಪುತ್ರೊಟ್ಟಿಬೈಲ್ ಮತ್ತು ನೆಹರುನಗರದಲ್ಲಿ ಸಾರ್ವಜನಿಕರು ರಸ್ತೆ ದಾಟುವಾಗ ಹೆಚ್ಚಿನ ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ವೇಗ ಹೆಚ್ಚಿರುವುದರಿಂದ ಶಾಲಾ ಮಕ್ಕಳಿಗೆ ಮತ್ತು ಸ್ಥಳೀಯ ಜನರಿಗೆ ಸಂಚಾರ ಮಾಡಲು ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಸಂಚಾರ ಸುವ್ಯವಸ್ಥೆಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಉಪಯುಕ್ತ ಎರಡು ಸ್ಥಳಗಳಲ್ಲಿ ಕೂಡಲೇ ಸಿ.ಸಿ. ಕ್ಯಾಮರಾಗಳನ್ನು ಅಳವಡಿಸುವಂತೆ ಪತ್ರದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here