ಬರಿಮಾರು ಶಾಲಾ ಬಸ್ ದುರಂತದಲ್ಲಿ ಮೃತಪಟ್ಟ ಬಾಲಕಿಯ ಮನೆಗೆ ಮಾಜಿ ಸಚಿವ ಬಿ. ರಮಾನಾಥ ರೈ ಭೇಟಿ

0

ವಿಟ್ಲ: ಬಂಟ್ವಾಳ ತಾಲೂಕಿನ ಬರಿಮಾರು ಸಮೀಪದ ಕಲ್ಲೆಟ್ಟಿ ಎಂಬಲ್ಲಿ ಖಾಸಗಿ ಶಾಲಾ ಬಸ್ಸಿನ ಮೇಲೆ ಮರ ಬಿದ್ದು ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಪುಟ್ಟ ಬಾಲಕಿ ಪೆರ್ನೆ ಗ್ರಾಮದ ನೆಕ್ಕರೆ ಅಮೈ ನಿವಾಸಿ ಚಿರನ್ವಿರವರ ಮನೆಗೆ ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ದುರಂತದಲ್ಲಿ ಅಮೂಲ್ಯ ಜೀವ ಕಳೆದುಕೊಂಡ ಬಾಲಕಿಯ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ ಅವರು, ಮೃತಳ ತಾಯಿ-ತಂದೆ ಹಾಗೂ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ದುಃಖದಲ್ಲಿ ಭಾಗಿಯಾದರು. ಈ ದುಃಖದ ಸಂದರ್ಭದಲ್ಲಿ ಆತ್ಮಸ್ಥೈರ್ಯ ಕಳೆದುಕೊಳ್ಳದೆ ಧೈರ್ಯದಿಂದ ಇರಬೇಕೆಂದು ಕುಟುಂಬಕ್ಕೆ ಸಾಂತ್ವನ ಹೇಳಿ, ಮೃತಳ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದರು.

ಈ ವೇಳೆ ದುರಂತದಲ್ಲಿ ಗಾಯಗೊಂಡಿರುವ ವಿದ್ಯಾರ್ಥಿಗಳು ಶೀಘ್ರ ಗುಣಮುಖರಾಗಲೆಂದು ಹಾರೈಸಿದ ಬಿ. ರಮಾನಾಥ ರೈ ಅವರು, ಇಂತಹ ದುರ್ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದರು.

ಈ ಸಂದರ್ಭದಲ್ಲಿ ಪ್ರಮುಖರಾದ ಬಂಟ್ಬಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಬೇಬಿ ಕುಂದರ್, ಮಾಣಿ‌ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಪ್ರಮುಖರಾದ ನಾರಾಯಣ ನಾಯ್ಕ್, ಚಂದ್ರಶೇಖರ್ ಬಂಡಾರಿ, ಬಿ ಆರ್ ಅಂಚನ್, ಫಾರೂಕ್ ಪೆರ್ನೆ, ಗೀತೆಶ್ ಪೆರ್ನೆ ಮೊದಲದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here