ಬಂಟ್ವಾಳ: ಬರಿಮಾರು ಸಮೀಪದ ಕಲ್ಲೆಟ್ಟಿ ದೈವಸ್ಥಾನದ ಬಳಿ ಕಲ್ಲಡ್ಕದ ಖಾಸಗಿ ಶಾಲಾ ಬಸ್ ಮೇಲೆ ಬೃಹತ್ ಮರ ಉರುಳಿ ಬಿದ್ದು ಶಾಲಾ ಬಾಲಕಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮೃತ ಬಾಲಕಿ ಚಿರನ್ವಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ರೂ. ಮಂಜೂರಾಗಿದೆ.
ಪುತ್ತೂರು ಶಾಸಕ ಅಶೋಕ್ ರೈ ಅವರ ಪ್ರಯತ್ನದ ಫಲವಾಗಿ ನೀಡಲಾದ ಈ ಪರಿಹಾರದ ಆದೇಶ ಪತ್ರವನ್ನು ಶಾಸಕರು ಮೃತ ಬಾಲಕಿಯ ಮನೆಗೆ ತೆರಳಿ ಬಾಲಕಿಯ ತಂದೆ ಮತ್ತು ತಾಯಿಯ ಕೈಗೆ ಹಸ್ತಾಂತರಿಸಿದರು. ಮಂಜೂರಾದ 5 ಲಕ್ಷ ರೂ. ಪರಿಹಾರದ ಮೊತ್ತವನ್ನು ಬಾಲಕಿಯ ತಾಯಿಯ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ.








