ಬೊಂಡಾಲ: ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರು ಇಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.
ಶಾಲಾ ಆಂಗ್ಲ ಶಿಕ್ಷಕಿ ಸರಸ್ವತಿ ಅವರು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಧ್ಯಾನ, ಪ್ರಾಣಾಯಾಮ ಹಾಗೂ ವಿವಿಧ ಆಸನಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ನಡೆಸಿಕೊಟ್ಟರು. ಮುಖ್ಯ ಶಿಕ್ಷಕರಾದ ಕಮಲಾಕ್ಷ ಅವರು ಯೋಗ ದಿನಾಚರಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಸುಜಾತಾ, ಹರಿಪ್ರಸಾದ, ಭಾರತಿ, ಪ್ರಕಾಶ ಹಾಗೂ ಕಛೇರಿ ಸಹಾಯಕರಾದ ಹರೀಶ್ ಪಾಲ್ಗೊಂಡಿದ್ದರು.








