ಬಂಟ್ವಾಳ: 2026–27ನೇ ಶೈಕ್ಷಣಿಕ ಸಾಲಿನ ಪ್ರಥಮ ಸೆಮಿಸ್ಟರ್ ಡಿಪ್ಲೊಮಾ ಹಾಗೂ ಲ್ಯಾಟರಲ್ ಎಂಟ್ರಿ (3ನೇ ಸೆಮಿಸ್ಟರ್) ಪ್ರವೇಶ ಪ್ರಕ್ರಿಯೆಯ ಅವಧಿಯನ್ನು ಕರ್ನಾಟಕ ಸರ್ಕಾರದ ತಾಂತ್ರಿಕ ಶಿಕ್ಷಣ ನಿರ್ದೇಶನಾಲಯವು 2026ರ ಆಗಸ್ಟ್ 11ರವರೆಗೆ ವಿಸ್ತರಿಸಿದೆ.
ಈ ಕುರಿತು ಸರ್ಕಾರಿ ಪಾಲಿಟೆಕ್ನಿಕ್, ಬಂಟ್ವಾಳದ ಪ್ರಾಂಶುಪಾಲರು ಪ್ರಕಟಣೆ ಹೊರಡಿಸಿದ್ದು, ಎಸ್ಎಸ್ಎಲ್ಸಿ ಉತ್ತೀರ್ಣ ವಿದ್ಯಾರ್ಥಿಗಳು ಹಾಗೂ ಲ್ಯಾಟರಲ್ ಎಂಟ್ರಿಗೆ ಅರ್ಹ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಕ್ಷಣವೇ ಪ್ರವೇಶ ಪಡೆಯುವಂತೆ ಮನವಿ ಮಾಡಿದ್ದಾರೆ.
ಸಂಸ್ಥೆಯಲ್ಲಿ ಇಂಜಿನಿಯರಿಂಗ್ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಅವಕಾಶವಿದ್ದು, ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ 2026ರ ಆಗಸ್ಟ್ 11ರೊಳಗೆ ಸರ್ಕಾರಿ ಪಾಲಿಟೆಕ್ನಿಕ್, ಬಂಟ್ವಾಳಕ್ಕೆ ಭೇಟಿ ನೀಡಿ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 87623 28660, 94488 35521, ಸರ್ಕಾರಿ ಪಾಲಿಟೆಕ್ನಿಕ್ ಬಂಟ್ವಾಳ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.








