ಬಂಟ್ವಾಳ: ದಡ್ಡಲಕಾಡು ಸರಕಾರಿ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಇತ್ತೀಚೆಗೆ ನಡೆದ ಬಂಟ್ವಾಳ ತಾಲೂಕು ಮಟ್ಟದ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆಯ 17 ವರ್ಷದೊಳಗಿನವರ (Under-17) ವಿಭಾಗದಲ್ಲಿ, ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ವಿದ್ಯಾನಿಕೇತನ ವಿದ್ಯಾಸಂಸ್ಥೆಯ 7ನೇ ತರಗತಿಯ ವಿದ್ಯಾರ್ಥಿ ಪ್ರಾರ್ಥನ್ ಪೂಜಾರಿ ಅತ್ಯುತ್ತಮ ಪ್ರದರ್ಶನ ನೀಡಿ, ಬಹುಮಾನ ಗಳಿಸಿದ್ದಾರೆ.
ತೀವ್ರ ಪೈಪೋಟಿಯಿಂದ ಕೂಡಿದ್ದ ಈ ಚಾಂಪಿಯನ್ಶಿಪ್ನಲ್ಲಿ ಪ್ರಾರ್ಥನ್ ತಮ್ಮ ಶ್ರೇಷ್ಠ ಕರಾಟೆ ಕೌಶಲ್ಯ, ಶಿಸ್ತು ಹಾಗೂ ಕಠಿಣ ಅಭ್ಯಾಸದ ಬಲದಿಂದ ಎದುರಾಳಿಗಳನ್ನು ಮಣಿಸಿ ವಿಜೇತನಾಗಿ ಹೊರಹೊಮ್ಮಿದ್ದಾರೆ.
ವಿದ್ಯಾರ್ಥಿಯ ಈ ಸಾಧನೆಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿರುವ ಸಂಸ್ಥೆಯ ಮುಖ್ಯಸ್ಥರು, ಮುಂಬರುವ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲೂ ಪ್ರಾರ್ಥನ್ ಹೀಗೆಯೇ ಯಶಸ್ಸು ಗಳಿಸಲಿ ಎಂದು ಶುಭ ಹಾರೈಸಿದ್ದಾರೆ.








