ಸಜೀಪನಡು ಆದರ್ಶ ಶಾಲೆಯಲ್ಲಿ ಆಟಿಡೊಂಜಿ ದಿನಾಚರಣೆ

0

ಬಂಟ್ವಾಳ: ತುಳುನಾಡಿನ ಸಂಸ್ಕೃತಿ ಹಾಗೂ ಪರಂಪರೆಯನ್ನು ಸಾರುವ ಆಷಾಢ ಮಾಸದ “ಆಟಿಡೊಂಜಿ ದಿನ” ವನ್ನು ಸಜೀಪನಡುವಿನ ಆದರ್ಶ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಚರಿಸಲಾಯಿತು.

ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಅಬ್ದುಲ್ ಜಸೀಮ್ ವಹಿಸಿದ್ದರು. ಹಿರಿಯರಾದ ಮೊಹಮ್ಮದ್ ಹನೀಫ್, ಹನೀಫ್ ಗೋಳಿಪಡ್ಪು, ಗಣೇಶ್ ಸಜೀಪ ಗುತ್ತು, PTA ಉಪಾಧ್ಯಕ್ಷೆ ಜೆನಿಟ್, ಅಫ್ರಾ, ಜೊತೆ ಕಾರ್ಯದರ್ಶಿಗಳಾದ ನಳಿನಾಕ್ಷಿ ಮತ್ತು ದಿವ್ಯ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶಾಲಾ ಮುಖ್ಯ ಶಿಕ್ಷಕಿ ವಸಂತಿ ಜಗದೀಶ್ ಸ್ವಾಗತಿಸಿದರು. ಸಹ ಶಿಕ್ಷಕಿ ಅನೀಷಾ ಮಾತನಾಡಿ ಆಟಿ ತಿಂಗಳ ವಿಶೇಷತೆಯನ್ನು ನೆನಪಿಸಿದರು. ಚಿತ್ರಾ ಅವರು ಆಟಿ ತಿಂಗಳ ಮಹತ್ವ ಮತ್ತು ತುಳುನಾಡಿನ ಆಚರಣೆಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ತುಳುನಾಡಿನ ಪುರಾತನ ವಸ್ತುಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಪಾಲ್ಗೊಂಡಿದ್ದರು. ಕೊನೆಯಲ್ಲಿ ಆಗಮಿಸಿದ ಎಲ್ಲರಿಗೂ ಆಟಿ ತಿಂಗಳ ವಿಶೇಷ ವೈವಿಧ್ಯಮಯ ತಿಂಡಿ-ತಿನಿಸುಗಳನ್ನು ಬಡಿಸಲಾಯಿತು. ತುಳು ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಅಗತ್ಯ ಎಂದು ಅತಿಥಿಗಳು ಅಭಿಪ್ರಾಯಪಟ್ಟರು.

LEAVE A REPLY

Please enter your comment!
Please enter your name here