ಮಂಗಳೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಮಂಗಳೂರು ನಗರದ ಅಳಕೆಯಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಮಟ್ಟಾರ ವಿಠ್ಠಲ ಕಿಣಿ ಅವರನ್ನು ಅವರ ಸ್ವಗೃಹದಲ್ಲಿ ಅ.9ರಂದು ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲಾಯಿತು. ಶಾಸಕ ವೇದವ್ಯಾಸ್ ಕಾಮತ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಕೃಷ್ಣಮರ್ತಿ ಅವರು ಮಟ್ಟಾರ ವಿಠ್ಠಲ ಕಿಣಿ ಅವರನ್ನು ಸನ್ಮಾನಿಸಿದರು.
ಈ ವೇಳೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರೊಂದಗೆ ಮಾತನಾಡಿದ ಮಟ್ಟಾರ ವಿಠ್ಠಲ ಕಿಣಿಯವರು ಸ್ವಾತಂತ್ರ್ಯ ಚಳುವಳಿಯು ಬಹಳ ಸ್ಪರ್ತಿದಾಯಕವಾಗಿತ್ತು, ಯುವಕರಾದ ನಾವು 1942ರ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಗಾಂಧೀಜಿಯವರ ಕರೆಯ ಮೇರೆಗೆ ಭಾಗವಹಿಸಿದ ಅನುಭವವನ್ನು ಹಂಚಿಕೊಂಡರು.