ಬಂಟ್ವಾಳ: ಕಲ್ಲಡ್ಕದಲ್ಲಿ ಆ.13ರಂದು ವಾಹನ ಜಾಥಾ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಪ್ರಸಾರವಾಗುತ್ತಿದೆ. ಆದರೆ ಈ ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆಯಿಂದ ಪೂರ್ವಾನುಮತಿ ಪಡೆದಿಲ್ಲ. ಸಾರ್ವಜನಿಕರ/ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುವಂಥ ಹಾಗೂ ಪೂರ್ವಾನುಮತಿ ಪಡೆಯದೆ ವಾಹನ ಜಾಥಾಗಳಂತಹ ಯಾವುದೇ ಕಾರ್ಯಕ್ರಮಗಳನ್ನು ನಡೆಸಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ಪೊಲೀಸ್ ಎಚ್ಚರಿಕೆ ನೀಡಿದೆ.
ಸಾರ್ವಜನಿಕರು ಯಾವುದೇ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಾಗ, ಆ ಕಾರ್ಯಕ್ರಮಕ್ಕೆ ಸಂಬಂಧಪಟ್ಟ ಇಲಾಖೆಗಳಿಂದ ಪಡೆಯಬೇಕಾದ ಪೂರ್ವಾನುಮತಿಯನ್ನು ಪಡೆಯಲಾಗಿದೆಯೇ ಎಂದು ಖಚಿತಪಡಿಸಿಕೊಂಡು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಇಲಾಖೆ ತಿಳಿಸಿದೆ.








