ಆಟಿ ಅಮಾವಾಸ್ಯೆ ಹಿನ್ನೆಲೆ : ನರಹರಿ ಕ್ಷೇತ್ರಕ್ಕೆ ಶಾಸಕ ರಾಜೇಶ್ ನಾೖಕ್ ಭೇಟಿ

0

ವಿಟ್ಲ: ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು ಅವರು ನರಹರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.


ಈ ಸಂದರ್ಭದಲ್ಲಿ ಕ್ಷೇತ್ರದಲ್ಲಿ ನಡೆದಿರುವ ಜೀರ್ಣೋದ್ಧಾರ ಕಾಮಗಾರಿಗಳನ್ನು ವೀಕ್ಷಿಸಿದ ಶಾಸಕರು, ದೇವಸ್ಥಾನದ ಅಭಿವೃದ್ಧಿ ಕಾರ್ಯಗಳ ಕುರಿತು ಆಡಳಿತ ಮಂಡಳಿಯ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಿದರು. ನರಹರಿ ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ದ್ವಿಪಥ ರಸ್ತೆಯಾಗಿ ಅಭಿವೃದ್ಧಿಪಡಿಸುವ ಕಾಮಗಾರಿ ರೂ.2 ಕೋಟಿ ವೆಚ್ಚದಲ್ಲಿ ಈಗಾಗಲೇ ಪೂರ್ಣಗೊಂಡಿದ್ದು, ಡಾಮರೀಕರಣಗೊಂಡ ರಸ್ತೆಯನ್ನು ಶಾಸಕರು ವೀಕ್ಷಿಸಿದರು.


ಕ್ಷೇತ್ರದ ಅಭಿವೃದ್ಧಿ ಹಾಗೂ ಭಕ್ತರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಶಾಸಕ ರಾಜೇಶ್ ನಾೖಕ್ ಅವರು ನೀಡಿರುವ ಸಹಕಾರವನ್ನು ದೇವಸ್ಥಾನದ ಆಡಳಿತ ಮಂಡಳಿ ಶ್ಲಾಘಿಸಿತು. ದೇವಸ್ಥಾನದ ಆಡಳಿತ ಮೊಕ್ತೇಸರ ಡಾ. ಪ್ರಶಾಂತ್ ಮಾರ್ಲ ಹಾಗೂ ಟ್ರಸ್ಟಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here