ಬಂಟ್ವಾಳ: ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದಲ್ಲಿರುವ, ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆ ಬಂಡಿತ್ತಡ್ಕ ಇಲ್ಲಿ ರಾಷ್ಟ್ರದ 80ನೇ ಸ್ವಾತಂತ್ರ್ಯ ದಿನಾಚರಣೆಯೊಂದಿಗೆ ಮೆಟ್ರಿಕ್ ಮೇಳ ಮತ್ತು ಸಾಂಸ್ಕೃತಿಕ ಅಟಿ ಕೂಟವನ್ನು ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಶಾಲಾ ವಿಧ್ಯಾರ್ಥಿಗಳು, ಶಾಲಾಭಿವೃದ್ಧಿ ಸಮಿತಿಯ ಎಲ್ಲಾ ಪದಾಧಿಕಾರಿಗಳು ಪೋಷಕರು, ಕನ್ಯಾನ ಮತ್ತು ಮಿತ್ತನಡ್ಕ ಕ್ಲಸ್ಟರ್ ನ ಸಂಪನ್ಮೂಲ ವ್ಯಕ್ತಿಯಾಗಿರುವ ಶ್ರೀಯುತ ಚಂದ್ರಶೇಖರ ಹಾಗೂ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಗಳು ಅಲ್ಲದೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿಯ ಪುಟಾಣಿ ಮಕ್ಕಳು, ಸದ್ರಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಊರ ಪರವೂರ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.
ಪೂರ್ವಹ್ನ 9:30ಕ್ಕೆ ಸರಿಯಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷೆಯವರಾದ ಖಮರುನ್ನಿಸಾ ನೆರವೇರಿಸಿದರು. ಬಳಿಕ ಸೇರಿದ ಸಭಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಡಿ.ಕೆ. ಶಾಹುಲ್ ಹಮೀದ್ ಕನ್ಯಾನ, ಮಾಜಿ ಸದಸ್ಯರುಗಳು, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರು, ಅಧ್ಯಕ್ಷರು, ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಶಾಲಾ ವಿಧ್ಯಾರ್ಥಿಗಳಿಂದ ದೇಶ ಭಕ್ತಿಗೀತೆ, ಭಾಷಣ ಸ್ಪರ್ಧಾ ಕಾರ್ಯಕ್ರಮ ಹಾಗೂ ಅಂಗನವಾಡಿ ಪುಟಾಣಿಗಳಿಂದ ದೇಶ ಭಕ್ತಿಗೀತೆ ಹಾಗೂ ವಿವಿಧ ನೃತ್ಯಗಳ ಮೂಲಕ ಮನರಂಜಿಸಿದರು.
ಈ ಸಂಧರ್ಭದಲ್ಲಿ 2026-27ನೇ ಸಾಲಿನಲ್ಲಿ ಹೊಸ ದಾಖಲಾದ ವಿದ್ಯಾರ್ಥಿಗಳಿಗೆ ಶೂ ಗಳನ್ನು ವಿತರಿಸಲಾಯಿತು ಹಾಗೂ ಹಳೆ ವಿದ್ಯಾರ್ಥಿಗಳ ವತಿಯಿಂದ ಈ ಶೈಕ್ಷಣಿಕ ವರ್ಷಕ್ಕೆ ದಾಖಲಾತಿ ಹೊಂದಿರುವ ವಿದ್ಯಾರ್ಥಿಗಳ ಖಾತೆಯಲ್ಲಿ ಒಂದು ಸಾವಿರ ರೂಪಾಯಿ ಠೇವಣಿ ಇಟ್ಟಿರುವ ಬಾಂಡ್ ಗಳನ್ನು ಹಂಚಲಾಯಿತು.
ಸಭೆಯನ್ನುದ್ದೇಶಿಸಿ ಮಾತನಾಡಿದ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆಯಾಗಿರುವ ಶ್ರೀಮತಿ ರೇಖಾ ರಮೇಶ್ ರವರು ಆಟಿಯ ಮಹತ್ವದ ಬಗ್ಗೆ ಹೇಳಿದರು. ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ, ಶ್ರೀಯುತ ಕೃಷ್ಣಕುಮಾರ್ ಕಮ್ಮಾಜೆರವರು ದೇಶಾಭಿಮಾನ ಹಾಗೂ ದೇಶಕ್ಕಾಗಿ ಹೋರಾಡಿದಂತಹ ಅನೇಕ ಹುತಾತ್ಮರನ್ನು ಈ ಸಂದರ್ಭದಲ್ಲಿ ಸ್ಮರಿಸಿ, ವಿದ್ಯಾರ್ಥಿಗಳ ಭವ್ಯ ಭವಿಷ್ಯಕ್ಕೆ ಹಾರೈಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ಮಹಮ್ಮದ್ ಅಲಿ ಬಂಡಿತ್ತಡ್ಕರವರು, ಈ ಶಾಲೆಯಲ್ಲಿನ ತನ್ನ ವಿದ್ಯಾರ್ಥಿ ಬದುಕನ್ನು ಸ್ಮರಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಸಂಧರ್ಭೋಚಿತವಾಗಿ ಮಾತಾಡಿದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀಯುತ ಇಸ್ಮಾಯಿಲ್ ಕುಕ್ಕಾಜೆಯವರು ಇಲ್ಲಿನ ವಿದ್ಯಾರ್ಥಿಗಳ ದಾಖಲಾತಿ ವೃದ್ಧಿಸುವಲ್ಲಿ ಶ್ರಮಿಸಿದ ಹಳೆ ವಿದ್ಯಾರ್ಥಿ ಸಂಘದ ಸಾಧನೆಯನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ಮೆಟ್ರಿಕ್ ಮೇಳದಲ್ಲಿ ಪ್ರದರ್ಶಿಸಲಾದ ವಸ್ತುಗಳನ್ನು , ಆಗಮಿಸಿದ್ದ ಸಭಿಕ ಅತಿಥಿಗಳೆಲ್ಲರೂ ಖರೀದಿಸಿ ವಿದ್ಯಾರ್ಥಿಗಳಿಗೆ ಉತ್ತಮ ಪ್ರೋತ್ಸಾಹ ನೀಡಿದರು. ಇದಲ್ಲದೆ, ಆಟಿ-ಕೂಟ ಇತ್ಯಾದಿ ವೈವಿಧ್ಯಮಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು. ಆಟಿಕೂಟದ ಸಲುವಾಗಿ ತಂದಿದ್ದ ವಿವಿಧ ತಿನಿಸುಗಳೊಂದಿಗೆ ನೆರೆದವರೆಲ್ಲರಿಗೂ ಭರ್ಜರಿ ಭೋಜನ ವ್ಯವಸ್ಥೆಯನ್ನು ಒದಗಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಸೆಕೀನಾ ಎಸ್ ರವರು ಸ್ವಾಗತಿಸಿದರು, ಅತಿಥಿ ಶಿಕ್ಷಕಿ ವನಿತಾರವರು ಕಾರ್ಯಕ್ರಮ ನಿರೂಪಿಸಿದರು, ಕೊನೆಯಲ್ಲಿ ಅಂಗನವಾಡಿ ಕಾರ್ಯಕರ್ತೆ, ಶ್ರೀಮತಿ ಶಾರದರವರು ಧನ್ಯವಾದಗೈದರು.








