ಶ್ರೀ ವೆಂಕಟರಮಣಸ್ವಾಮೀ ಕಾಲೇಜಿನಲ್ಲಿ ಎನ್.ಎಸ್.ಎಸ್. ಉದ್ಘಾಟನಾ ಕಾರ್ಯಕ್ರಮ

0

ಬಂಟ್ವಾಳ: ವಿದ್ಯಾರ್ಥಿಗಳು ಅಧ್ಯಯನದೊಂದಿಗೆ ಸೇವಾಮನೋಭಾವವನ್ನು ಬೆಳಸಿಕೊಂಡಾಗ ಮಾತ್ರ ವಿದ್ಯೆಗೆ ಮಹತ್ವಬರುತ್ತದೆ. ಯುವಜನತೆ ತನ್ನೊಂದಿಗೆ ಸಮಾಜದ ಇತರೆ ಜನರ ಶ್ರೇಯೋಭಿವೃದ್ಧಿಗೆ ಶ್ರಮಿಸುವ ಮನಸ್ಥಿತಿಯನ್ನು ಹೊಂದಬೇಕು ಎಂದು ಬಂಟ್ವಾಳದ ಬಿ.ಆರ್.ಎಂ.ಪಿ.ಸಿ. ಶಾಲೆಯ ಶಿಕ್ಷಕರಾದ ಮನೋಹರ ಎಸ್ ದೊಡಮನಿ ನುಡಿದರು.

ಅವರು ಶ್ರೀ ವೆಂಕಟರಮಣಸ್ವಾಮೀ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ಆಯೋಜಿಸಿದ್ದ ಎನ್.ಎಸ್.ಎಸ್. ಕಾರ್ಯಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಯುವಜನತೆ ಸಮಾಜಮುಖಿಯಾದಾಗ ಮಾತ್ರ ಜೀವನವು ಸಾರ್ಥಕವಾಗುವುದು. ತಮ್ಮ ವಿದ್ಯಾರ್ಥಿದೆಸೆಯಲ್ಲಿಯೇ ಸಾಮಾಜಿಕ ಹೊಣೆಗಾರಿಕೆಯನ್ನರಿತು ಮುನ್ನಡೆದಾಗ ಮಾತ್ರ ದೇಶದ ಅಭಿವೃದ್ಧಿಗೆ ವೇಗದೊರಕುತ್ತದೆ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್.ವಿ.ಎಸ್. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಎಂ.ಡಿ.ಮಂಚಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ವೇದಿಕೆಯಲ್ಲಿ ಎನ್.ಎಸ್.ಎಸ್.ಘಟಕ ನಾಯಕರಾದ ಪ್ರಾಜ್ಞವಿ ಹಾಗೂ ಅಲ್ವಿನ್ ಡಿಸೋಜಾ ಉಪಸ್ಥಿತರಿದ್ದರು. ಎನ್.ಎಸ್.ಎಸ್.ಕಾರ್ಯಕ್ರಮಾಧಿಕಾರಿ ಡಾ.ಕಾಶೀನಾಥ ಶಾಸ್ತ್ರಿ ಹೆಚ್.ವಿ. ಸ್ವಾಗತಿಸಿ, ವಾಣಿಜ್ಯ ಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಕಾವ್ಯಾ ವಂದಿಸಿದರು. ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ನಿರೀಕ್ಷಾ ನಿರೂಪಿಸಿ, ವಿದ್ಯಾರ್ಥಿನಿಯರಾದ ನಿಧಿ ಮತ್ತು ತಂಡ ಪ್ರಾರ್ಥಿಸಿದರು.

LEAVE A REPLY

Please enter your comment!
Please enter your name here