ಬಂಟ್ವಾಳ: ತಾಂತ್ರಿಕ ಶಿಕ್ಷಣ ಇಲಾಖೆಯ ಸಿ-09 ಮತ್ತು ಸಿ-15 ಪಠ್ಯಕ್ರಮದಡಿ ಪ್ರವೇಶ ಪಡೆದು ವ್ಯಾಸಂಗ ಪೂರ್ಣಗೊಳಿಸದೇ ಬಾಕಿ ವಿಷಯಗಳನ್ನು ಹೊಂದಿರುವ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ನವೆಂಬರ್/ಡಿಸೆಂಬರ್ 2026ರ ಸೆಮಿಸ್ಟರ್ ಪರೀಕ್ಷೆಗೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ ಎಂದು ಸರ್ಕಾರಿ ಪಾಲಿಟೆಕ್ನಿಕ್ ಬಂಟ್ವಾಳದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಂತ್ರಿಕ ಪರೀಕ್ಷಾ ಮಂಡಳಿಯ ನಿರ್ದೇಶನದಂತೆ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಹಿತದೃಷ್ಟಿಯಿಂದ ಕಾಲಮಿತಿ ಸಡಿಲಿಕೆ ಮಾಡಿ ಏಕರೂಪದ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.ದಂಡರಹಿತವಾಗಿ ಪರೀಕ್ಷಾ ಶುಲ್ಕ ಪಾವತಿಸಲು ಅಕ್ಟೋಬರ್ 5, 2026 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗೆ ಸಂಸ್ಥೆಯ ಕಚೇರಿಯನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.







