ಬಂಟ್ವಾಳ: ಚುಟುಕು ಸಾಹಿತ್ಯ ಪರಿಷತ್ ಬಂಟ್ವಾಳ ಘಟಕದ ಅಧ್ಯಕ್ಷರಾಗಿ ರಮೇಶ್ ನಾಯ್ಕ್ ಮೆಲ್ಕಾರ್ ಆಯ್ಕೆಯಾಗಿದ್ದಾರೆ.
ಚುಟುಕು ಸಾಹಿತ್ಯದ ಬೆಳವಣಿಗೆ ಹಾಗೂ ಸಾಹಿತ್ಯಾಸಕ್ತರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಚುಟುಕು ಸಾಹಿತ್ಯ ಪರಿಷತ್ ಕಳೆದ ಹಳವಾರು ವರ್ಷಗಳಿಂದ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ಪ್ರತೀ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಘಟಕಗಳನ್ನು ಹೊಂದಿದ್ದು ವಿವಿಧ ಸಾಹಿತ್ಯಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಕ್ರಿಯವಾಗಿದೆ. ಚುಟುಕು ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಯುವ ಹಾಗೂ ಹಿರಿಯ ಸಾಹಿತಿಗಳನ್ನು ಪ್ರೋತ್ಸಾಹಿಸುವುದು, ಚುಟುಕು ಸಾಹಿತ್ಯದ ಕುರಿತು ಅರಿವು ಮೂಡಿಸುವುದು ಮತ್ತು ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವುದು ಮುಖ್ಯ ಉದ್ದೇಶವಾಗಿದೆ.
ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಅತ್ಯಂತ ಸಕ್ರಿಯವಾಗಿದ್ದು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ತನ್ನ ಪಟಕಗಳ ಮೂಲಕ ಸಾಹಿತ್ಯ ಸೇವೆಯ ನಿರಂತರತೆಯನ್ನು ಕಾಯ್ದುಕೊಂಡು ಬರುತ್ತಿದೆ.ಈ ಹಿಂದೆ ಆನಂದ ರೈ ಅಡ್ಕಸ್ಥಳ ಅವರ ಅದ್ಯಕ್ಷತೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಂಟ್ವಾಳ ತಾಲೂಕಿನ ಚುಸಾಪ ಘಟಕ ವಿಸರ್ಜನೆಗೊಂಡು ನೂತನ ಸಮಿತಿಯನ್ನು ರೂಪಿಸಲಾಗುವುದು. ದಕ್ಷಿಣ ಕನ್ನಡ ಜಿಲ್ಲಾ ಚುಸಾಪ ಅಧ್ಯಕ್ಷರಾದ ಹರೀಶ್ ಸುಲಾಯ ಒಡ್ಡಂಬೆಟ್ಟು ಮತ್ತು ಗೌರವಾಧ್ಯಕ್ಷರಾದ ಇರಾನೇಮು ಪೂಜಾರಿ ಅವರ ಶಿಫಾರಸಿನ ಮೇಲೆ ರಮೇಶ್ ನಾಯ್ಕ್ ಮೇಲ್ಕಾರ್ ಅವರನ್ನು ರಾಜ್ಯ ಪ್ರಧಾನ ಸಂಚಾಲಕರಾದ ಡಾ.ಎಮ್.ಜಿ.ಆರ್.ಅರಸ್ ಅವರು ಬಂಟ್ವಾಳ ತಾಲೂಕಿನ ಚುಸಾಪ ಘಟಕದ ಅದ್ಯಕ್ಷರನ್ನಾಗಿ ನೇಮಕ ಮಾಡಿರುತ್ತಾರೆ.








