ಬಂಟ್ವಾಳ : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ನಾಗರಿಕರ ಸೇವಾ ಕೇಂದ್ರದಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಅಥವಾ http://pmkisan.gov.in ಪೊರ್ಟಲ್ನ ಫಾರ್ಮರ್ಸ್ ಕೋರ್ನರ್ ಮೂಲಕ ಆಧಾರ್ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆ ದಾಖಲಿಸಿ ಆ.31ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು. ಇ-ಕೆವೈಸಿ ಮಾಡಿಸದಿದ್ದಲ್ಲಿ ರೈತರ ಆರ್ಥಿಕ ನೆರವು ಸ್ಥಗಿತಗೊಳಿಸಲಾಗುವುದು. ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.