ಮಂಗಳೂರು: ಸಾವರ್ಕರ್ ಬಗ್ಗೆ ಕಾಂಗ್ರೆಸ್ ಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯ ಮಾತ್ರ ಇರೋದು. ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರರಲ್ಲ ಎಂದು ನಾವೆಲ್ಲೂ ಹೇಳಿಲ್ಲ. ಸ್ವಾತಂತ್ರ್ಯ ಹೋರಾಟ ಮಾಡಿದ್ದಕ್ಕೆ ಬ್ರಿಟಿಷರು ಅವರನ್ನು ಅಂಡಮಾನ್ ಜೈಲಿಗೆ ಹಾಕಿದ್ದರು ಎಂದು ಕಾಂಗ್ರೆಸ್ ಮುಖಂಡ, ವಿಪಕ್ಷ ಉಪ ನಾಯಕ ಯುಟಿ ಖಾದರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಸಾವರ್ಕರ್ ಬ್ರಿಟಿಷರಿಗೆ ಕ್ಷಮಾಪಣೆ ಕೋರಿ ಪತ್ರ ಬರೆದಿದ್ದಕ್ಕೆ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಹಾಗೆ ಜೈಲಿನಿಂದ ಹೊರಬಂದಿದ್ದ ಸಾವರ್ಕರ್, ಸ್ವಾತಂತ್ರ್ಯಕ್ಕಾಗಿ ಆನಂತರ ಹೋರಾಡಲಿಲ್ಲ. ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದೂ ಇದನ್ನು ಮಾತ್ರ ಎಂದು ಹೇಳಿದ್ದಾರೆ.