ಉಗ್ರರ ಗುಂಡಿಗೆ ಬಿಎಸ್‌ಎಫ್ ಯೋಧ ಬಲಿ

0

ತ್ರಿಪುರಾದಲ್ಲಿ ನಡೆದಿರುವ ಉಗ್ರರ ದಾಳಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಹೆಡ್ ಕಾನ್‌ಸ್ಟೆಬಲ್ ಹುತಾತ್ಮರಾಗಿದ್ದಾರೆ. ನಿಷೇಧಿತ ಉಗ್ರ ಸಂಘಟನೆ ‘ನ್ಯಾಷನಲ್ ಲಿಬರೇಶನ್ ಫ್ರಂಟ್ ಆಫ್ ತ್ರಿಪುರ'(ಎನ್‌ಎಲ್‌ಎಫ್‌ಟಿ) ಈ ದಾಳಿಯನ್ನು ನಡೆಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಉತ್ತರ ತ್ರಿಪುರಾದ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಹೆಡ್ ಕಾನ್‌ಸ್ಟೆಬಲ್ ಗಿರಿಜೇಶ್ ಕುಮಾರ್ ಉದ್ದೆ (53) ಗಸ್ತು ತಿರುಗುತ್ತಿದ್ದಾಗ ಗುಂಡಿನ ದಾಳಿ ನಡೆದಿದೆ.

LEAVE A REPLY

Please enter your comment!
Please enter your name here