ದ.ಕ ಜಿಲ್ಲಾಧಿಕಾರಿಯಿಂದ ಅನಧಿಕೃತ ಫ್ಲೆಕ್ಸ್ ‌ ತೆರವುಗೊಳಿಸುವಂತೆ ಸೂಚನೆ

0

ಮಂಗಳೂರು :ರಾಜ್ಯದಲ್ಲಿ ಹೊಸ ತಲೆನೋವಾಗಿ ಪರಿಣಮಿಸಿದ ಪ್ಲೆಕ್ಸ್‌ ಅಳವಡಿಕೆಗಳ ಸಮಸ್ಯೆಯನ್ನು ಬಗೆಹರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಮುಂದಾಗಿದ್ದು, ಅದರ ಸಲುವಾಗಿ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಕಛೇರಿಯಲ್ಲಿ ಡಿಸಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಜಿಲ್ಲೆಯಲ್ಲಿ ಪ್ಲೆಕ್ಸ್‌ ಅಳವಡಿಕೆಯ ನಿಯಮಗಳ ಕುರಿತಾಗಿ ಜಿಲ್ಲಾಧಿಕಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದಾರೆ.ಅನಧಿಕೃತ ಮತ್ತು ವಿವದಾತ್ಮಕ ಬ್ಯಾನರ್‌ ತೆರವಿಗೆ ಡಿಸಿ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಪೊಲೀಸರ ಸಹಕಾರದಲ್ಲಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿರುವ ಅವರು, ವಿವಾದಾತ್ಮಕ ಅಥವಾ ದ್ವೇಷ ಸಾರುವ ಸಂದೇಶದ ಫ್ಲೆಕ್ಸ್ ಗಳು ಕಂಡುಬಂದ ಕೂಡಲೇ ಅವುಗಳನ್ನು ಸಂಬಂಧಿಸಿದ ಸ್ಥಳದ ಅಧಿಕಾರಿಗಳು ತೆರವುಗೊಳಿಸಬೇಕು, ಇಲ್ಲಿ ಪೊಲೀಸರ ಸಹಕಾರ ಪಡೆಯಬೇಕು, ಹಾಗೂ ಅಧಿಕೃತ ಸ್ಥಳಗಳಲ್ಲಿ ಫ್ಲೆಕ್ಸ್ ಹಾಕುವ ಮುನ್ನ ಸಂಬಂಧಿಸಿದ ಅಧಿಕಾರಿಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು, ಹಾಗೂ ಅದನ್ನು ಮುದ್ರಿಸಿದವರ ವಿವರ ಅದರಲ್ಲಿರಬೇಕು. ಅನುಮತಿ ಪಡೆಯದೆ ಫ್ಲೆಕ್ಸ್ ಅಳವಡಿಸಿದರೆ ಕಠಿಣ ಕ್ರಮಕೈಗೊಳ್ಳಲಾಗುವುದು, ಈ ನಿಟ್ಟಿನಲ್ಲಿ ಫ್ಲೆಕ್ಸ್ ಪ್ರಿಂಟರ್ ಗಳ ಸಭೆ ಕರೆಯಲಾಗುವುದು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here