ಮಂಗಳೂರು: ಸಮಯವನ್ನು ಸದುಪಯೋಗ ಮಾಡಿಕೊಂಡು ಸಾಧಕರಾಗುವತ್ತ ವಿದ್ಯಾರ್ಥಿಗಳು ಚಿತ್ತ ಹರಿಸಬೇಕು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್ ಹೇಳಿದರು. ದಿ.22ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ಡಿ. ದೇವರಾಜ ಅರಸು ಅವರ ಜನ್ಮದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿದ್ಯಾರ್ಥಿ ಜೀವನದಲ್ಲಿ ಸಮಯವನ್ನು ವ್ಯರ್ಥ ಮಾಡದೇ ಓದಿನಲ್ಲಿ ಕಳೆಯಬೇಕು, ಆರ್ಥಿಕವಾಗಿ ಅಥವಾ ಬಡತನದಿಂದಾಗಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಬಾರದು ಎಂಬ ಉದ್ದೇಶದಿಂದ ಸರ್ಕಾರ ವಿದ್ಯಾರ್ಥಿ ನಿಲಯಗಳನ್ನು ತೆರೆದಿದೆ, ಸರ್ಕಾರ ನೀಡುವ ಈ ರೀತಿಯ ಪ್ರೋತ್ಸಾಹದ ಲಾಭ ಪಡೆದು ವಿದ್ಯಾರ್ಥಿಗಳು ಉತ್ತಮವಾಗಿ ಶಿಕ್ಷಣ ಪಡೆದು ಸಾಧಕರಾಗಬೇಕು, ಆ ಮೂಲಕ ಸರ್ಕಾರ ನೀಡುವ ಸೌಲಭ್ಯಗಳ ಸದ್ಭಳಕೆಯಾಗಬೇಕು ಹಾಗೂ ವಿದ್ಯಾರ್ಥಿ ನಿಲಯಗಳು ಮಹತ್ವ ಪಡೆದುಕೊಳ್ಳಬೇಕು ಎಂದರು.
ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಉಪಸ್ಥಿತರಿದ್ದರು . ಜಿಲ್ಲಾ ಅಧಿಕಾರಿ ರಶ್ಮಿ ಸ್ವಾಗತಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಸಚಿವರು ಸನ್ಮಾನಿಸಿದರು. ನಂತರದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನೇರವೇರಿತ