ಮಂಗಳೂರು : ಕೇಂದ್ರ ಸರ್ಕಾರದಿಂದ ನೀಡಲಾಗುವ 2022-23ನೇ ಸಾಲಿನ ನಾರಿಶಕ್ತಿ ಪುರಸ್ಕಾರಕ್ಕಾಗಿ ವ್ಯಕ್ತಿ ಹಾಗೂ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಹಿಳಾ ಸಬಲೀಕರಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ನಾರೀಶಕ್ತಿ ಪುರಸ್ಕಾರ ನೀಡಲಾಗುವುದು. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಸೂಕ್ತ ಪ್ರಸ್ತಾವನೆಯನ್ನು ಅರ್ಹ ವ್ಯಕ್ತಿ ಮತ್ತು ಸಂಸ್ಥೆಗಳಿಂದ ಮುಕ್ತ ನಾಮಪತ್ರಗಳನ್ನು ವೆಬ್‍ಸೈಟ್ www.awards.gov.inಮೂಲಕ 2022ರ ಅಕ್ಟೋಬರ್ 31ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.