ಬಂಟ್ವಾಳ: ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಲಾಯಿಲಬೈಲು ಎಂಬಲ್ಲಿ ಸಾಕು ನಾಯಿಗಳನ್ನು ಚಿರತೆ ದಾಳಿ ನಡೆಸಿ ಕೊಂಡೊಯ್ದಿರುವ ಘಟನೆ ನಡೆದಿದೆ. ಕಳೆದ ಒಂದು ತಿಂಗಳಿನಿಂದ ಚಿರತೆ ಹಾವಳಿ ಹೆಚ್ಚಾಗಿದ್ದು, ಸ್ಥಳೀಯರಿಗೆ ಸಾಕು ಪ್ರಾಣಿಗಳ ರಕ್ಷಣೆಯೇ ಸವಾಲಾಗಿ ಪರಿಣಮಿಸಿದೆ. ಕಳೆದ ಕೆಲವು ದಿನಗಳಿಂದ ಲಾಯಿಲ ಗ್ರಾಮದ ಹಂದೆವೂರು ಬೈಲು ಹಾಗೂ ಲಾಯಿಲ ಬೈಲು ಗಾಣದ ಕೊಟ್ಟಿಗೆ ಎಂಬಲ್ಲಿಂದ ಕಟ್ಟಿ ಹಾಕಿದ ನಾಯಿಗಳನ್ನು ರಾತ್ರಿ ಸಮಯದಲ್ಲಿ ಚಿರತೆ ದಾಳಿ ಮಾಡಿದೆ.
ಸ್ಥಳೀಯರು ತಮ್ಮ ಸಾಕು ಪ್ರಾಣಿಗಳನ್ನು ಯಾವ ರೀತಿ ರಕ್ಷಿಸಿಕೊಳ್ಳಬಹುದು ಎಂಬ ಚಿಂತೆಯಲ್ಲಿದ್ದಾರೆ. ಸಂಬಂಧಪಟ್ಟ ಇಲಾಖೆ ತಕ್ಷಣ ಕಾರ್ಯಾಚರಣೆ ನಡೆಸಿ ಚಿರತೆ ಹಾವಳಿಯಿಂದ ಸಾಕು ಪ್ರಾಣಿಗಳನ್ನು ರಕ್ಷಿಸಬೇಕು ಎಂದು ತಮ್ಮ ನೋವನ್ನು ತೋಡಿಕೊಳ್ಳುತಿದ್ದಾರೆ. ಆ.24ರಂದು ಅರಣ್ಯ ಇಲಾಖೆಯ ಅಧಿಕಾರಿಗಳ ತಂಡವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಚಿರತೆ ಹಿಡಿಯುವ ಕಾರ್ಯಚರಣೆ ನಡೆಸಲಿದ್ದಾರೆ ಎಂದು ಲಾಯಿಲ ಉಪ ಅರಣ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.