ಬಂಟ್ವಾಳ : ಪ್ರಧಾನಮಂತ್ರಿ ನರೇಂದ್ರ ಮೋದಿ ಮೀನುಗಾರಿಕೆ ಹಾಗೂ ಪಶುಸಂಗೋಪನೆಯನ್ನು ಕೃಷಿಗೆ ಪೂರಕ ಚಟುವಟಿಕೆಗಳೆಂದು ಗುರುತಿಸಿ, ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಅವರಿಗೂ ವಿಸ್ತರಿಸಿದ್ದಾರೆ. ರಾಜ್ಯದಲ್ಲಿ ಮೀನುಗಾರರಿಗೆ ಆದ್ಯತೆಯ ಮೇರೆಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಒದಗಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಾಜ್ಯಮಟ್ಟದ ಬ್ಯಾಂಕರುಗಳ ಸಭೆ ನಡೆಸಿ ಈ ಕುರಿತು ಸಿಎಂ ಬೊಮ್ಮಾಯಿ ಚರ್ಚಿಸಿದ್ದಾರೆ.
ಮೊದಲ ಹಂತದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡುಗಳನ್ನು ತ್ವರಿತವಾಗಿ ಒದಗಿಸುವಂತೆ ಸಿಎಂ ಸೂಚಿಸಿದ್ದಾರೆ.