ಮಂಗಳೂರಿಗೆ ಮೋದಿ ಆಗಮನ ;ಬಂಟ್ವಾಳ ಬಿಜೆಪಿಯಿಂದ ವಿಶೇಷ ಸಭೆ

0

ಬಂಟ್ವಾಳ : ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಸಪ್ಟೆಂಬರ್ 2 ರಂದು ಮಂಗಳೂರಿಗೆ ಆಗಮಿಸಿ ಕೂಳೂರಿನ ಗೋಲ್ಡ್ ಪಿಂಚ್ ಸಿಟಿ ಮೈದಾನದಲ್ಲಿ ಜರಗಲಿರುವ ಬೃಹತ್ ಸಮಾವೇಶದಲ್ಲಿ ಭಾಗವಹಿಸುವ ಕಾರ್ಯಕ್ರಮದ ಅಂಗವಾಗಿ ವಿಶೇಷ ಸಭೆ ಆ. 25ರಂದು ಬಿ ಸಿ ರೋಡು ಸ್ಷರ್ಶಾ ಕಲಾಮಂದಿರದಲ್ಲಿ ಜರುಗಿತು.

ಕ್ಷೇತ್ರ ಶಾಸಕ ರಾಜೇಶ್ ನಾಯ್ಕ್ ಮಾತನಾಡಿ ಜಿಲ್ಲೆಗೆ ಆಗಮಿಸುವ ಪ್ರಧಾನ ಮಂತ್ರಿಯವರ ಕಾರ್ಯಕ್ರಮದಲ್ಲಿ ಲಕ್ಷಾಂತರ ಜನ ಸೇರಲಿರುವುದರಿಂದ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ದೃಷ್ಟಿಯಿಂದ ನಮ್ಮ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಪ್ರತಿ ಬೂತುಗಳಿಂದ ಕನಿಷ್ಟ 100 ಕಾರ್ಯಕರ್ತರನ್ನು ಹಾಗೂ ಪಕ್ಷದ ಅಭಿಮಾನಿಗಳನ್ನು ಕರೆದುಕೊಂಡು ಬರುವ ಜವಾಬ್ದಾರಿಯನ್ನು ಪಕ್ಷದ ಪ್ರಮುಖರು ವಹಿಸಿಕೊಂಡು ಬಂಟ್ವಾಳದಿಂದ ಸುಮಾರು 25000 ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲ್ಲಿದ್ದಾರೆ ಎಂದು ಕ್ಷೇತ್ರ ಶಾಸಕ ರಾಜೇಶ್ ನಾಯ್ಕ್ ತಿಳಿಸಿದರು.

ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದ್ರಿ ಮುಖ್ಯ ಅತಿಥಯಾಗಿ ಭಾಗವಹಿಸಿದರು. ಸಭೆಯಲ್ಲಿ ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್ ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ ,ರವೀಶ್ ಶೆಟ್ಟಿ , ಮಾಜಿ ಶಾಸಕ ರುಕ್ಮಯ ಪೂಜಾರಿ , ಪದ್ಮನಾಭ ಕೊಟ್ಟಾರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬೂಡ ಅಧ್ಯಕ್ಷ ದೇವದಾಸ ಶೆಟ್ಟಿ ,ಸುಲೋಚನ ಭಟ್ ಮತ್ತು ಕ್ಷೇತ್ರ ಪದಾಧಿಕಾರಿಗಳು ಪಕ್ಷದ ಜಿಲ್ಲಾ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ವಿವಿಧ ಪ್ರಕೋಷ್ಠ ಪ್ರಮುಖರು ಜನಪ್ರತಿನಿಧಿಗಳು ಉಪಸ್ಥಿತರಿದ್ದರು .

LEAVE A REPLY

Please enter your comment!
Please enter your name here