ಪುಂಜಾಲಕಟ್ಟೆ: ಬೈಕ್ ನಡುವೆ ಅಪಘಾತ – ವಿದ್ಯಾರ್ಥಿ ಮಹಮ್ಮದ್ ಶಫೀಕ್ ಸ್ಥಳದಲ್ಲೇ ಸಾವು

0

ಬಂಟ್ವಾಳ: ಕರಾಯದಿಂದ ಮಂಗಳೂರಿಗೆ ಸಾಗುತ್ತಿದ್ದ ಬೈಕ್ ಹಾಗೂ ಪುಂಜಾಲಕಟ್ಟೆಯಿಂದ ಮಡಂತ್ಯಾರ್ ಕಡೆ ಬರುತ್ತಿದ್ದ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದು ಕರಾಯ ನಿವಾಸಿ ಮಹಮ್ಮದ್ ಶಫೀಕ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಆ.29ರಂದು ಮುಂಜಾನೆ ನಡೆದಿದೆ. ಶಫೀಕ್ ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಕಾಲೇಜಿಗೆ ತೆರಳುತ್ತಿರುವ ವೇಳೆ ಈ ಘಟನೆ ಸಂಭವಿಸಿದೆ.

ಇನ್ನೊಂದು ಬೈಕ್ ನಲ್ಲಿದ್ದವರು ಮಡಂತ್ಯಾರಿನ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುವವರು ಎನ್ನಲಾಗಿದೆ. ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here