ಬಂಟ್ವಾಳ: ದೇವರ ಪ್ರೇರಣೆಯಂತೆ ಭಕ್ತರ ನಿಷ್ಕಲ್ಮಶ ಭಕ್ತಿ ಮತ್ತು ಶ್ರಮದಾನ ಸಹಿತ ಸಮರ್ಪಣಾ ಮನೋಭಾವದ ಕೊಡುಗೆಯಿಂದ ಗ್ರಾಮೀಣ ಪ್ರದೇಶಗಳ ದೇವಸ್ಥಾನ ಮತ್ತಿತರ ಶ್ರದ್ಧಾ ಕೇಂದ್ರಗಳ ಪುನರ್ ನಿಮಾಣ ಸಾಧ್ಯವಾಗುತ್ತದೆ ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದ್ದಾರೆ.
ಇಲ್ಲಿನ ಕುಡಂಬೆಟ್ಟು ಗ್ರಾಮದ ಉರುಡಾಯಿ ಶ್ರೀ ಮುಖ್ಯಪ್ರಾಣ ಸ್ವಾಮಿ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಪ್ರಯುಕ್ತ ಭಾನುವಾರ(ಆ.28) ನಡೆದ ವಿಜ್ಞಾಪನಾ ಪತ್ರದ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಾಜಿ ಸಚಿವ ಬಿ.ರಮಾನಾಥ ರೈ ವಿಜ್ಞಾಪನಾ ಪತ್ರದ ಬಿಡುಗಡೆಗೊಳಿಸಿ ಮಾತನಾಡಿ, ‘ಭೂ ಮಸೂದೆ ಕಾಯ್ದೆ ಜಾರಿ ಬಳಿಕ ಜಿಲ್ಲೆಯ ದುರ್ಬಲ ವರ್ಗದ ಜನತೆಗೆ ಸಾಮಾಜಿಕ ನ್ಯಾಯ ದೊರೆತು ಬಹುತೇಕ ಎಲ್ಲಾ ಧಾರ್ಮಿಕ ಕ್ಷೇತ್ರಗಳ ಪುನರ್ ನಿರ್ಮಾಣ ಮತ್ತು ಬ್ರಹ್ಮಕಲಶೋತ್ಸವ ನಡೆಸಲು ಸಾಧ್ಯವಾಗಿದೆ’ ಎಂದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅಮ್ಮು ರೈ ಹರ್ಕಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.