ಸೆ.4: ಪೊಸಳ್ಳಿ ಕುಲಾಲ ಸಮುದಾಯ ಭವನ ಮೇಲಂತಸ್ತು ಕಟ್ಟಡ ಕಾಮಗಾರಿಗೆ ಚಾಲನೆ

0

ಬಂಟ್ವಾಳ : ಬಿ.ಸಿ.ರೋಡ್ ಪೊಸಳ್ಳಿ ಕುಲಾಲ ಸಮುದಾಯ ಭವನದ ಮೇಲಂತಸ್ತು ಕಟ್ಟಡ ಕಾಮಗಾರಿಗೆ ಸೆ. 4ರಂದು ಬೆಳಗ್ಗೆ 10 ಗಂಟೆಗೆ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಚಾಲನೆ ನೀಡಲಿದ್ದಾರೆಎಂದು ಆ. 30ರಂದು ಬಿ.ಸಿ.ರೋಡ್ ಪ್ರೆಸ್ ಕ್ಲಬ್‌ನಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ನಾರಾಯಣ ಸಿ. ಪೆರ್ನೆ ತಿಳಿಸಿದ್ದಾರೆ.

ಕಾರ್ಯ್ರಮದಲ್ಲಿ ಮಾಣಿಲ ಶ್ರೀಧಾಮ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ದೀಪ ಪ್ರಜ್ವಲಿಸಲಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ಶಿಲಾ ಫಲಕ ಅನಾವರಣ ಮಾಡಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಕುಂಭ ನಿಧಿ ಸಂಚಯನಕ್ಕೆ ಚಾಲನೆ ನೀಡಲಿದ್ದು, ಮಾಜಿ ಬಿ. ರಮಾನಾಥ ರೈ ಕಟ್ಟಡ ವಿನ್ಯಾಸ ಅನಾವರಣಗೊಳಿಸುವರು. ಮುಖ್ಯ ಅತಿಥಿಗಳಾಗಿ ದ.ಕ.ಜಿಲ್ಲಾ ಕುಲಾಲ ಮಾತೃಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್, ಬಂಟ್ವಾ ಳ ಪುರಸಭಾ ಸದಸ್ಯೆ ಶೋಭಾ ಹರಿಶ್ಚಂದ್ರ ಭಾಗವಹಿಸಲಿದ್ದಾರೆ. ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನ ರಿ. ಮಂಗಳೂರು ಇದರ ಅಧ್ಯಕ್ಷ ಡಾ. ಅಣ್ಣಯ್ಯ ಕುಲಾಲ್ ಅವರು ದೇವರಾಜ ಅರಸು ರಾಜ್ಯ ಪ್ರಶಸ್ತಿ ಪುರಸ್ಕೃತರಾಗಿದ್ದು ಅವರಿಗೆ ಅಭಿನಂದನೆ ಕಾರ್ಯಕ್ರಮ ನಡೆಯಲಿದೆ.

ಈಗಿರುವ ಸಭಾಭವನದಲ್ಲಿ ಸ್ಥಳಾವಕಾಶದ ಕೊರತೆಯ ಕಾರಣಕ್ಕೆ ಮೇಲಂತಸ್ತು ಕಟ್ಟಡ ಕಾಮಗಾರಿಗೆ ರೂ. 2.5 ಕೋಟಿಯ ಯೋಜನೆ ರೂಪಿಸಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಕಟ್ಟಡ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ನಾವೂರು, ಗೌರವಾಧ್ಯಕ್ಷ ಕೃಷ್ಣಪ್ಪ ಬಿ., ಬಂಟ್ವಾಳ ತಾಲೂಕು ಸುಧಾರಕ ಸಂಘದ ಪ್ರಧಾನ ಕಾರ್ಯದರ್ಶಿ ಲಕ್ಷ ಣ ಕುಲಾಲ್, ಕಾರ್ಯದರ್ಶಿ ಸುಕುಮಾರ್ ಬಂಟ್ವಾಳ, ಸುಂದರ ಬಿ. , ಸತೀಶ್ ಬಿ. ಕುಲಾಲ್, ಮಚ್ಚೇಂದ್ರ ಸಾಲ್ಯಾನ್, ರಮೇಶ್ ಸಾಲ್ಯಾನ್, ದಯಾನಂದ ನೇರಂಬೋಳು, ಮನೋಹರ ನೇರಂಬೋಳು, ಮಹಿಳಾ ಘಟಕದ ಅಧ್ಯಕ್ಷೆ ಸುಶೀಲಾ ಲಿಂಗಪ್ಪ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here