9.75 ಕೋಟಿ ರೂ. ವೆಚ್ಚದಲ್ಲಿ ನಂದಾವರ ವಿನಾಯಕ ಶಂಕರನಾರಾಯಣ ದುರ್ಗಾಂಭ ಕ್ಷೇತ್ರದ ಕಾಮಗಾರಿ – ಶಾಸಕರಿಂದ ಶಿಲಾನ್ಯಾಸ

0

9.75 ಕೋಟಿ ವೆಚ್ಚದಲ್ಲಿ ನೂತನ ಸೇತುವೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು, ಹೆಚ್ಚುವರಿ ನಾಲ್ಕೈದು ಕೋಟಿ ಅನುದಾನವನ್ನು ಬಳಕೆ ಮಾಡಿ ಕೊಂಡು ಪೂರ್ಣಪ್ರಮಾಣದ ಅತೀ ಸಮೀಪ ಸಂಪರ್ಕ ರಸ್ತೆ ಕ್ಷೇತ್ರ ಕ್ಕೆ ಲಭ್ಯವಾಗಲಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ‌ಅವರು ಹೇಳಿದರು.

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ , ಆರ್.ಎಸ್.ಎಸ್.ಮುಖಂಡ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಮಾತನಾಡಿ,
ದೇವಸ್ಥಾನ ಎಂದರೆ ಧರ್ಮದ ಸಂಪರ್ಕ ಸೇತುವೆ ಇದ್ದಂತೆ, ಪ್ರಸ್ತುತ ದೇವಸ್ಥಾನ ಕ್ಕೆ ಬರುವ ಭಕ್ತರಿಗೆ ಅನುಕೂಲವಾಗುವ ರೀತಿಯಲ್ಲಿ ಶಾಸಕ ರಾಜೇಶ್ ನೇತೃತ್ವದಲ್ಲಿ ಉತ್ತಮ ಯೋಜನೆ ‌ರೂಪುಗೊಂಡಿದ್ದು,ಅತ್ಯಂತ ಯಶಸ್ವಿಯಾಗಿ ಅನುಷ್ಠಾನ ಗೊಳ್ಳಲಿ.
ದೇವಸ್ಥಾನ ಕ್ಕೆ ಬರಬೇಕಾದರೆ ಸುತ್ತುಬಳಸಿ ಬರಬೇಕಾದ ಸಂದಿಗ್ಧ ಪರಿಸ್ಥಿತಿ ಇತ್ತು, ಪ್ರಸ್ತುತ ಜನರ ಬೇಡಿಕೆಯ ಹಿನ್ನೆಲೆಯಲ್ಲಿ ಭಕ್ತರ ಅನುಕೂಲವಾಗುವ ರೀತಿಯಲ್ಲಿ ನೂತನ ಸೇತುವೆ ನಿರ್ಮಾಣಗೊಳ್ಳಲಿದೆ ಎಂದು ಅವರು ಹೇಳಿದರು.
ಸಜೀಪ ಮಾಗಣೆ ತಂತ್ರಿ ಎಂ .ಸುಬ್ರಹ್ಮಣ್ಯ ಭಟ್ ಅವರು ವೈಧಿಕ ವಿಧಿವಿಧಾನಗಳನ್ನು ನೆರವೇರಿಸಿ ದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ರುಕ್ಮಯ ಪೂಜಾರಿ, ಕಿಯೋನಿಕ್ಸ್ ನಿಕಟಪೂರ್ವ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮಾಜಿ ತಾ.ಪಂ.ಅಧ್ಯಕ್ಷ ಯಶವಂತ ದೇರಾಜೆ, ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ದೇವಸ್ಥಾನ ದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅರವಿಂದ ಭಟ್, ನಿಕಟಪೂರ್ವ ಅಧ್ಯಕ್ಷ ಎ.ಸಿ.ಭಂಡಾರಿ ಬಂಟ್ವಾಳ ಬಿಜೆಪಿ ಮಂಡಲದ ಪ್ರಮುಖರು, ದೇವಸ್ಥಾನ ದ ವ್ಯವಸ್ಥಾಪನ ಸಮಿತಿ ಸದಸ್ಯರು , ಗ್ರಾಮ ಪಂಚಾಯತ್ ಸದಸ್ಯರು ಗಳು ಊರಿನ ಪ್ರಮುಖರು ಉಪಸ್ಥಿತರಿದ್ದರು.

ಬಂಟ್ವಾಳ: ಜನರ ಬಹುದಿನಗಳ ಬೇಡಿಕೆಯಂತೆ ಪಾಣೆಮಂಗಳೂರಿನಿಂದ ನಂದಾವರ ದೇವಸ್ಥಾನಕ್ಕೆ ಈಗಾಗಲೇ 9.75 ಕೋಟಿ ವೆಚ್ಚದಲ್ಲಿ ನೂತನ ಸೇತುವೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು, ಹೆಚ್ಚುವರಿ ನಾಲ್ಕೈದು ಕೋಟಿ ಅನುದಾನವನ್ನು ಬಳಕೆ ಮಾಡಿ ಕೊಂಡು ಪೂರ್ಣಪ್ರಮಾಣದ ಅತೀ ಸಮೀಪ ಸಂಪರ್ಕ ರಸ್ತೆ ಕ್ಷೇತ್ರ ಕ್ಕೆ ಲಭ್ಯವಾಗಲಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ‌ಅವರು ಹೇಳಿದರು.

ಸುಮಾರು 9.75 ಕೋಟಿ ವೆಚ್ಚದಲ್ಲಿ ನಂದಾವರ ವಿನಾಯಕ ಶಂಕರನಾರಾಯಣ ದುರ್ಗಾಂಭ ಕೇತ್ರಕ್ಕೆ ನೂತನ ಸೇತುವೆ ನಿರ್ಮಾಣ ಕಾಮಗಾರಿಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ಶಾಸಕನಾಗಿ ಆಯ್ಕೆಯಾದ ಪ್ರಾರಂಭದಲ್ಲಿ ಹಿರಿಯರಾದ ಡಾ| ಪ್ರಭಾಕರ್ ಭಟ್ ಹಾಗೂ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ ಅವರ ಆಶಯದಂತೆ ರಸ್ತೆ ಸಂಪರ್ಕ ಕ್ಕೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಪ್ರಸ್ತುತ ಲೋಕೋಪಯೋಗಿ ಇಲಾಖೆ ಮೂಲಕ ಕಾಮಗಾರಿ ಅನುಷ್ಠಾನ ಗೊಳ್ಳುತ್ತಿದೆ . ನೇತ್ರಾವತಿ ನದಿಯ ಬದಿ ರಮನೀಯ ಸ್ಥಳದಲ್ಲಿ ದೇವಸ್ಥಾನ ಇರುವದರಿಂದ ಅಲ್ಲಿಗೆ ಬರುವ ಭಕ್ತರಿಗೆ ಹೆಚ್ಚಿನ ಅನುಕೂಲವಾಗಬೇಕು ಎಂಬ ನಿಟ್ಟಿನಲ್ಲಿ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ . ಈ ರಸ್ತೆ ನಿರ್ಮಾಣ ದಿಂದ ದೇವಸ್ಥಾನ ಕ್ಕೆ ಬರುವ ಭಕ್ತಾದಿಗಳ ಸಂಖ್ಯೆ ಕೂಡ ಹೆಚ್ಚಳವಾಗಬೇಕು ಹಾಗೂ ಕಾಮಗಾರಿ ಯಾವುದೇ ವಿಘ್ನ ವಿಲ್ಲದೆ ಕ್ಲಪ್ತಸಮಯದಲ್ಲಿ ಜನರ ಉಪಯೋಗಕ್ಕೆ ಸಿಗಬೇಕು ಈ ನಿಟ್ಟಿನಲ್ಲಿ ಕಾಮಗಾರಿ ನಡೆಸಲಾಗುತ್ತಿದೆ ಎಂದರು.

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ , ಆರ್.ಎಸ್.ಎಸ್.ಮುಖಂಡ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಮಾತನಾಡಿ, ದೇವಸ್ಥಾನ ಎಂದರೆ ಧರ್ಮದ ಸಂಪರ್ಕ ಸೇತುವೆ ಇದ್ದಂತೆ, ಪ್ರಸ್ತುತ ದೇವಸ್ಥಾನ ಕ್ಕೆ ಬರುವ ಭಕ್ತರಿಗೆ ಅನುಕೂಲವಾಗುವ ರೀತಿಯಲ್ಲಿ ಶಾಸಕ ರಾಜೇಶ್ ನೇತೃತ್ವದಲ್ಲಿ ಉತ್ತಮ ಯೋಜನೆ ‌ರೂಪುಗೊಂಡಿದ್ದು,ಅತ್ಯಂತ ಯಶಸ್ವಿಯಾಗಿ ಅನುಷ್ಠಾನ ಗೊಳ್ಳಲಿ. ದೇವಸ್ಥಾನ ಕ್ಕೆ ಬರಬೇಕಾದರೆ ಸುತ್ತುಬಳಸಿ ಬರಬೇಕಾದ ಸಂದಿಗ್ಧ ಪರಿಸ್ಥಿತಿ ಇತ್ತು, ಪ್ರಸ್ತುತ ಜನರ ಬೇಡಿಕೆಯ ಹಿನ್ನೆಲೆಯಲ್ಲಿ ಭಕ್ತರ ಅನುಕೂಲವಾಗುವ ರೀತಿಯಲ್ಲಿ ನೂತನ ಸೇತುವೆ ನಿರ್ಮಾಣಗೊಳ್ಳಲಿದೆ ಎಂದು ಅವರು ಹೇಳಿದರು.

ಸಜೀಪ ಮಾಗಣೆ ತಂತ್ರಿ ಎಂ .ಸುಬ್ರಹ್ಮಣ್ಯ ಭಟ್ ಅವರು ವೈಧಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ರುಕ್ಮಯ ಪೂಜಾರಿ, ಕಿಯೋನಿಕ್ಸ್ ನಿಕಟಪೂರ್ವ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮಾಜಿ ತಾ.ಪಂ.ಅಧ್ಯಕ್ಷ ಯಶವಂತ ದೇರಾಜೆ, ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ದೇವಸ್ಥಾನ ದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಅರವಿಂದ ಭಟ್, ನಿಕಟಪೂರ್ವ ಅಧ್ಯಕ್ಷ ಎ.ಸಿ.ಭಂಡಾರಿ ಬಂಟ್ವಾಳ ಬಿಜೆಪಿ ಮಂಡಲದ ಪ್ರಮುಖರು, ದೇವಸ್ಥಾನ ದ ವ್ಯವಸ್ಥಾಪನ ಸಮಿತಿ ಸದಸ್ಯರು , ಗ್ರಾಮ ಪಂಚಾಯತ್ ಸದಸ್ಯರು ಗಳು ಊರಿನ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here