ಮಂಗಳೂರಿನಲ್ಲಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ನರೇಂದ್ರ ಮೋದಿ

0

ಪ್ರಧಾನಮಂತ್ರಿ ಅವರು ಕುಡ್ಲದ ಜನರನ್ನು ಉದ್ದೇಶಿಸಿ ಹೇಳಿದ್ದು ಹೀಗೆ..

ಪ್ರಧಾನಿ ಲೋಕಾರ್ಪಣೆ ಮಾಡಿರುವ ಯೋಜನೆಗಳು ಇಂತಿವೆ

ಪುತ್ತೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಸೆ.2ರಂದು ಮಂಗಳೂರಿಗೆ ಭೇಟಿ ನೀಡಿ ನವ ಮಂಗಳೂರು ಬಂದರು ಪ್ರಾಧಿಕಾರದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು. ಕೇರಳದಿಂದ ಮಧ್ಯಾಹ್ನ ಮಂಗಳೂರಿಗೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಬಳಿಕ ನಗರದ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಜರಗಿದದ ಬೃಹತ್ ಸಮಾವೇಶದಲ್ಲಿ ಪ್ರಧಾನಿ ಮೋದಿಯವರಿಗೆ ರಾಜ್ಯ ನಾಯಕರು ಪೇಟ, ಶಾಲು, ಮಲ್ಲಿಗೆ ಹಾರ ಹಾಕಿ ಸ್ವಾಗತಿಸಿದರು. ಜೊತೆಗೆ ಶ್ರೀಕೃಷ್ಣನ ಪ್ರತಿಮೆ, ಪರುಶುರಾಮನ ಪ್ರತಿಮೆ ನೀಡಿ ಗೌರವಿಸಿದರು.

ಬೃಹತ್ ಸಮಾವೇಶದಲ್ಲಿ ಲಕ್ಷಾಂತರ ಮಂದಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ‘ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರದ ಸಹೋದ್ಯೋಗಿಗಳೇ ಮತ್ತು ರಾಜ್ಯ ನಾಯಕರೇ, ಮತ್ತು ಸಹೋದರರೇ, ಇಂದು ಭಾರತದ ಸಮುದ್ರದ ಶಕ್ತಿಗೆ ದೊಡ್ಡ ದಿನ. ಕೆಲ ಗಂಟೆಗಳ ಮೊದಲು ಲೋಕಾರ್ಪಣೆ ಮಾಡಿದ ಸ್ವದೇಶಿ ಏರ್‌ಕ್ರಾಫ್ಟ್ ಭಾರತೀಯರಿಗೆ ಹೆಮ್ಮೆ ಮೂಡಿಸಿದೆ. ಈಗ ಮಂಗಳೂರಿನಲ್ಲಿ 3,800 ಕೋಟಿ ರೂಪಾಯಿಗೂ ಹೆಚ್ಚು ಹಣದ ಯೋಜನೆಗಳ ಶಂಕುಸ್ಥಾಪನೆಯಿದೆ ಎಂದರು.

‘ನಮ್ಮ ಸರಕಾರ ಮೀನುಗಾರರ ಅಭಿವೃದ್ಧಿಗಾಗಿ ಹಲವು ಯೋಜನೆ ಜಾರಿ ಮಾಡಲಾಗುತ್ತಿದೆ. ಇದಕ್ಕಾಗಿ ನಾನು ಕರ್ನಾಟಕ ರಾಜ್ಯ ಮತ್ತು ನಿಮಗೆಲ್ಲಾ ಅಭಿನಂದನೆ ಸಲ್ಲಿಸುತ್ತೇನೆ. ಈ ಯೋಜನೆಗಳಿಂದ ವ್ಯಾಪಾರ, ವಹಿವಾಟು, ಉದ್ಯೋಗಕ್ಕೆ ಹೆಚ್ಚು ಶಕ್ತಿ ಬರಲಿದೆ. ವಿಶೇಷವಾಗಿ ಮೀನುಗಾರರು ಮತ್ತು ಕೃಷಿಕರಿಗೆ ಲಾಭವಾಗಲಿದೆ’ ಎಂದ ಅವರು ‘ಗೆಳೆಯರೇ ಈ ಬಾರಿ ಸ್ವಾತಂತ್ರ ದಿನದಂದು ಕೆಂಪುಕೋಟೆಯಲ್ಲಿ ಮಾತನಾಡಿದ ಪ್ರಮುಖ ವಿಷಯ ಅಭಿವೃದ್ಧಿ ಭಾರತದ ನಿರ್ಮಾಣ ಕೂಡ ಒಂದು. ಮೇಕ್ ಇನ್ ಇಂಡಿಯಾವನ್ನು ಮಾಡುವುದು ಪ್ರಮುಖವಾಗಿದೆ. ವಿಶ್ವದಲ್ಲಿ ನಮ್ಮ ಉತ್ಪನ್ನಗಳು ಹೆಚ್ಚಾಗಬೇಕು. ರಫ್ತು ಹೆಚ್ಚಾಗಬೇಕು. ಇದೇ ಚಿಂತನೆಯಿಂದ ನಮ್ಮ ಸರಕಾರ ಎಂಟು ವರ್ಷದಿಂದ ದೇಶದ ಮೂಲಸೌಕರ್ಯದ ಮೇಲೆ ಹೆಚ್ಚು ಕೆಲಸವಾಗುತ್ತಿದೆ. ಕಳೆದ ಎಂಟು ವರ್ಷಗಳಲ್ಲಿ ಇದು ಎರಡರಷ್ಟು ಹೆಚ್ಚಾಗಿದೆ’ ಎಂದು ಹೇಳಿದರು.

‘ಇಲ್ಲಿನ ಯೋಜನೆಗಳಿಂದ ಕರ್ನಾಟಕ ಮತ್ತು ದೇಶದ ಅಭಿವೃದ್ಧಿಯಾಗಲಿದೆ. ಅಮೃತ ಕಾಲದಲ್ಲಿ ಭಾರತ ಗ್ರೀನ್ ಗೋಥ್, ಗ್ರೀನ್ ಜಾಬ್‌ಗಳ ಮೂಲಕ ಮುನ್ನಡೆಯುತ್ತಿದೆ. ಕಳೆದ ಎಂಟು ವರ್ಷಗಳಲ್ಲಿ ಕರ್ನಾಟಕಕ್ಕೆ ಹೆಚ್ಚು ಲಾಭವಾಗಿದೆ. ಕರ್ನಾಟಕ ಸಾಗರ ಮಾಲಾ ಯೋಜನೆಯ ಹೆಚ್ಚು ಲಾಭ ಪಡೆದ ರಾಜ್ಯವಾಗಿದೆ’ ಎಂದು ಪ್ರಧಾನಮಂತ್ರಿ ಹೇಳಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಬಳಿಕ ವಿಶೇಷ ವಿಮಾನ ನಿಲ್ದಾಣದ ಮೂಲಕ ಮೋದಿ ದೆಹಲಿಗೆ ತೆರಳಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಯಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಷಿ, ಶೋಭಾ ಕರಂದ್ಲಾಜೆ, ಸಂದರಾದ ಬಿಜೆಪಿ ರಾಜ್ಯಾಧ್ಯಕ್ಷ‌ ನಳಿನ್ ಕುಮಾರ್ ಕಟೀಲ್, ಸಚಿವರಾದ ಸುನೀಲ್ ಕುಮಾರ್, ಎಸ್.ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಬಂಟ್ವಳ ಶಾಸಕ ರಾಜೇಶ್‌ ನಾಯಕ್‌ ಉಳಿಪ್ಪಾಡಿಗುತ್ತು, ಪುತ್ತೂರು ಶಾಸಕ ಸಂಜೀವ ಮಠಂದೂರು, ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ, ಮಂಗಳೂರು ಶಾಸಕರಾದ ವೇದವ್ಯಾಸ್‌ ಕಾಮತ್‌, ಡಾ. ಭರ್ತ ಶೆಟ್ಟಿ, ಮೂಡಬಿದ್ರೆ ಶಾಸಕ ಉಮಾನಾಥ್‌ ಕೋಟ್ಯಾನ್ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸುದ್ದಿ ನ್ಯೂಸ್ ಮಂಗಳೂರು ಯೂ ಟ್ಯೂಬ್ ಚಾನೆಲ್ ಮೂಲಕ ನೇರಪ್ರಸಾರ ಮಾಡಲಾಗಿದ್ದು ಸಾವಿರಾರು ಮಂದಿ ವೀಕ್ಷಿಸಿದ್ದಾರೆ.

ಪ್ರಧಾನಿ ಲೋಕಾರ್ಪಣೆ ಮಾಡಿರುವ ಯೋಜನೆಗಳು ಇಂತಿವೆ

ಕಂಟೈನರ್‌ಗಳು ಹಾಗೂ ಇತರ ಸರಕು ನಿರ್ವಹಣೆಗಾಗಿ ಬರ್ತ್ ಸಂಖ್ಯೆ 14 ರ ಯಾಂತ್ರೀಕರಣ (ರೂ. 281 ಕೋಟಿ), ಬಿಎಸ್6 ಉನ್ನತೀಕರಣ ಯೋಜನೆ (ರೂ. 1829 ಕೋಟಿ), ಸಮುದ್ರ ನೀರಿನ ಶುದ್ಧೀಕರಣ ಘಟಕ (ರೂ. 677 ಕೋಟಿ) ಗಳು ಸೇರಿವೆ. ಇದೇ ಸಂದರ್ಭದಲ್ಲಿ ನರೇಂದ್ರ ಮೋದಿ, ಎನ್‌ಎಂಪಿಟಿಯಲ್ಲಿ ಸಮಗ್ರ ಎಲ್ಪಿಜಿ ಹಾಗೂ ಬೃಹತ್ ಪಿಓಎಲ್ ಸೌಲಭ್ಯ (ಅಂದಾಜು ವೆಚ್ಚ ರೂ. 500 ಕೋಟಿ), ಶೇಖರಣಾ ಟ್ಯಾಂಕ್‌ಗಳು ಹಾಗೂ ಖಾದ್ಯ ತೈಲ ಸಂಸ್ಕರಣಾಗಾರ ನಿರ್ಮಾಣ (ರೂ. 100 ಕೋಟಿ), ಬಿಟುಮಿನ್ ಶೇಖರಣಾ ಟ್ಯಾಂಕ್ ಘಟಕಗಳ ನಿರ್ಮಾಣ (ರೂ. 100 ಕೋಟಿ) ಹಾಗೂ ಬಿಟುಮಿನ್, ಖಾದ್ಯ ತೈಲ ಶೇಖರಣಾ ಟ್ಯಾಂಕರ್ ಗಳು ಹಾಗೂ ಸಂಬಂಧಿತ ಸೌಲಭ್ಯಗಳ ನಿರ್ಮಾಣ (ರೂ. 100 ಕೋಟಿ) ಕಾಮಗಾರಿಗಳಿಗೆ ಶಿಲಾನ್ಯಾಸ. ಜೊತೆಗೆ, ಕುಳಾಯಿಯಲ್ಲಿನ ಇಪಿಸಿ ಮಾದರಿಯಲ್ಲಿ ಮೀನುಗಾರಿಕಾ ಬಂದರು ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ.

LEAVE A REPLY

Please enter your comment!
Please enter your name here