ಶ್ರೀರಾಮ ಸೆಕೆಂಡರಿ ಸ್ಕೂಲ್‌ನಲ್ಲಿ ತಾಲೂಕು ಮಟ್ಟದ ಪುಟ್ಬಾಲ್ ಪಂದ್ಯಾಟ

0

ಬಂಟ್ವಾಳ: ಶ್ರೀರಾಮ ಸೆಕೆಂಡರಿ ಸ್ಕೂಲ್‌ನಲ್ಲಿ ಸೆ.6ರಂದು ಬಂಟ್ವಾಳ ತಾಲೂಕು ಮಟ್ಟದ ಪುಟ್ಬಾಲ್ ಪಂದ್ಯಾಟ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀರಾಮ ವಿದ್ಯಾಕೇಂದ್ರದ ಸಹಸಂಚಾಲಕ ರಮೇಶ್ ಅವರು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಕ್ರೀಡೆಗಳು ಪೂರಕವಾಗಿದ್ದು  ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಸ್ಪರ್ಧಿಸಿ ಕ್ರೀಡಾ ಮನೋಭಾವದಿಂದ ಆಡುವ ಮೂಲಕ ಗೆಲುವು ಸಾಧಿಸಬೇಕು  ಎಂದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕ ವಿಷ್ಣು ಹೆಬ್ಬಾರ್, ಶ್ರೀರಾಮ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಕರುಣಾಕರ ಉಪಸ್ಥಿತರಿದ್ದರು. ಶ್ರೀರಾಮ ಸೆಕೆಂಡರಿ ಸ್ಕೂಲ್‌ನ ಆಂಗ್ಲ ಭಾಷಾ ಶಿಕ್ಷಕಿ ಶ್ವೇತ ಇವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here