ಆಶ್ರಮದ ಸದಸ್ಯರಿಗೆ ಬಟ್ಟೆ ವಿತರಣೆ, ಮೂವರು ಸಾಧಕರಿಗೆ ಸನ್ಮಾನ
ಪುತ್ತೂರು : ಮಾಜಿ ಸಚಿವ ಬೆಳ್ಳಿಪ್ಪಾಡಿ ರಮಾನಾಥ ರೈ ಅಭಿಮಾನಿ ಬಳಗ ಪುತ್ತೂರು ಇವರ ನೇತೃತ್ವದಲ್ಲಿ ಸೆ.15ರಂದು ಬಿರುಮಲೆ ಬೆಟ್ಟದಲ್ಲಿರುವ ಮಾನಸಿಕ ವಿಕಲಚೇತನರ ವೃತ್ತಿ ತರಬೇತಿ ಮತ್ತು ಪುನರ್ವಸತಿ ಕೇಂದ್ರವಾಗಿರು ಪ್ರಜ್ಞಾ ಆಶ್ರಮದಲ್ಲಿ ರಮಾನಾಥ ರೈರವರ 71ನೇ ಹುಟ್ಟುಹಬ್ಬ ಆಚರಣೆಯನ್ನು ಆಶ್ರಮದ ಸದಸ್ಯರಿಗೆ ಬಟ್ಟೆ ವಿತರಣೆ ಮತ್ತು ಸಾಧಕರಿಗೆ ಸನ್ಮಾನ ಮಾಡುವ ಮೂಲಕ ವಿಶೇಷ ರೀತಿಯಲ್ಲಿ ಆಚರಿಸಿದರು. ಇದೇ ಸಂದರ್ಭದಲ್ಲಿ ಕೇಕ್ ಕತ್ತರಿಸಿದ ರಮಾನಾಥ ರೈ ಅವರು ಆಶ್ರಮದ ಮಕ್ಕಳ ಬಾಯಿಗೆ ಕೇಕ್ ನೀಡುವ ಮೂಲಕ ಒಂದು ಸಲ ಭಾವುಕರಾದರು.
ಕಾರ್ಯಕ್ರಮದ ಆರಂಭದಲ್ಲಿ ಗಾಯಕ ಚಂದ್ರಶೇಖರ ಹೆಗ್ಡೆ ಮತ್ತು ತಂಡದವರಿಂದ ಸಂಗೀತ ರಸಮಂಜರಿ ನಡೆಯಿತು. ರಾಜ್ಯ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಎನ್.ಕೆ ಜಗನ್ನಿವಾಸ ರಾವ್ ಕಾರ್ಯಕ್ರಮ ಉದ್ಘಾಟಿಸಿದರು. ಕೊಂಬೆಟ್ಟು ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಎನ್‌ಎಸ್‌ಯುಐ ಕರ್ನಾಟಕ ಸಮಿತಿ ರಾಜ್ಯ ಉಪಾಧ್ಯಕ್ಷ ಪಾರೂಕ್ ಬಯಬೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಬೆಂಗಳೂರು ರಾಜೀವ ಗಾಂಧಿ ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯ ಡಾ. ರಘು ಬೆಳ್ಳಿಪ್ಪಾಡಿ, ಯುವ ವಾಹಿನಿ ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ಡಾ. ರಾಜಾರಾಮ್ ಕೆ.ಬಿ, , ಧಾರ್ಮಿಕ ಮುಖಂಡ ಕೆ.ಆರ್ ಹುಸೈನ್ ದಾರಿಮಿ ರೆಂಜಲಾಡಿ,ಮಹಿಳಾ ಕಾಲೇಜು ನಿವೃತ ಪ್ರಾಂಶುಪಾಲ ಕ್ಷೇವಿಯರ್ ಡಿ.ಸೋಜ, ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನೇಮಾಕ್ಷ ಸುವರ್ಣ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯರಾದ ಅನಿತಾ ಹೇಮನಾಥ ಶೆಟ್ಟಿ, ಎಮ್.ಎಸ್ ಮೊಹಮ್ಮದ್, ಮಾಜಿ ಪುರಸಭೆ ಅಧ್ಯಕ್ಷ ಸೂತ್ರಬೆಟ್ಟು ಜಗನ್ನಾಥ ರೈ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.