ಹ್ಯಾಂಡ್ ಬಾಲ್ ಪಂದ್ಯಾಟ: ಅಮ್ಟೂರ್ ದೇವಮಾತ ಅಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಮೈಸೂರ್ ವಿಭಾಗಿಯ ಮಟ್ಟಕ್ಕೆ ಆಯ್ಕೆ

0

ಬಂಟ್ವಾಳ: ಕರ್ನಾಟಕ ರಾಜ್ಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಆಟೋಟ ಸ್ಪರ್ಧೆ ಸೆ.16ರಂದು ಮಂಗಳೂರು ಲೇಡಿಹಿಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರಗಿತು.

ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಭಾಗವಹಿಸಿರುವ ಬಂಟ್ವಾಳ ತಾಲೂಕನ್ನು ಪ್ರತಿನಿಧಿಸಿದ ಅಮ್ಟೂರು ಕರಿಂಗಾಣ ದೇವ ಮಾತಾ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಪ್ರಾಥಮಿಕ ಶಾಲಾ ಬಾಲಕರ ತಂಡದಲ್ಲಿ ಪ್ರಥಮ, ಬಾಲಕಿಯರ ತಂಡವು ದ್ವಿತೀಯ ಸ್ಥಾನ ಹಾಗೂ ಪ್ರೌಢ ಶಾಲಾ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದು ಮೈಸೂರು ವಿಭಾಗಿಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಅನ್ಸಾರ್ ಕೊಳಕೆ ತರಬೇತಿ ನೀಡಿದ್ದಾರೆ. ಇವರಿಗೆ ಶಾಲಾ ಸಂಚಾಲಕರದ ಪೌಲ್ ಪಿಂಟೊ, ಮುಖ್ಯೊಪಾದ್ಯಾಯರಾದ ಕಿರಣ್ ಪಿಂಟೊ ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಮತ್ತು ಶಾಲಾ ವಿದ್ಯಾರ್ಥಿಗಳು ಅಭಿನಂದಿಸಿದರು.

LEAVE A REPLY

Please enter your comment!
Please enter your name here