ರಾಷ್ಟ್ರಭಕ್ತಿಗೆ ಎನ್ ಎಸ್ ಎಸ್ ಶಿಬಿರ ಪೂರಕ: ರಾಘವೇಂದ್ರ ಭಟ್
ಬಂಟ್ವಾಳ: ಗುರುಹಿರಿಯರನ್ನು ಗೌರವಿಸಿ ನಾಯಕತ್ವ ಗುಣ ಮತ್ತು ಸಾಧನಾಶೀಲ ಮನೋಭಾವ ಮೈಗೂಡಿಸಿಕೊಂಡು ರಾಷ್ಟ್ರಭಕ್ತಿ ಉದ್ದೀಪನಗೊಳಿಸಲು ಎನ್ ಎಸ್ ಎಸ್ ಶಿಬಿರ ಪೂರಕವಾಗಿದೆ ಎಂದು ರೋಟರಿ ವಲಯ ಸೇನಾನಿ ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ ಹೇಳಿದ್ದಾರೆ. ಇಲ್ಲಿನ ರಾಯಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಿದ್ಧಕಟ್ಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಶನಿವಾರ ಆರಂಭಗೊಂಡ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಕಾರ್ಯಕ್ರಮ ದಲ್ಲಿ ಅವರು ಮಾತನಾಡಿದರು.
ರಾಯಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ನಿತ್ಯಾನಂದ ಪೂಜಾರಿ ಕೆಂತಲೆ ಶಿಬಿರಕ್ಕೆ ಚಾಲನೆ ನೀಡಿದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಭಾಕರ ಪ್ರಭು, ಪ್ರಾಂಶುಪಾಲ ಉದಯ ಕುಮಾರ್, ಉದ್ಯಮಿ ರೂಪಾ ರಾಜೇಶ ಶೆಟ್ಟಿ, ಪತ್ರಕರ್ತ ಮೋಹನ್ ಕೆ.ಶ್ರೀಯಾನ್ ಶುಭ ಹಾರೈಸಿದರು.
ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹರೀಶ ಆಚಾರ್ಯ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಮೇಶ ಗೌಡ, ಮುಖ್ಯಶಿಕ್ಷಕ ಜಯರಾಮ ಪಡ್ರೆ, ಪ್ರಮುಖರಾದ ಕೆ.ಪರಮೇಶ್ವರ ಪೂಜಾರಿ, ನೋಣಯ ಶೆಟ್ಟಿಗಾರ್ ಸಿದ್ಧಕಟ್ಟೆ ಮತ್ತಿತರರು ಇದ್ದರು. ಶಿಬಿರಾಧಿಕಾರಿ ಶೀನಪ್ಪ ಎನ್. ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಉಪನ್ಯಾಸಕರಾದ ಶ್ರೀನಿವಾಸ ನಾಯ್ಕ್ ವಂದಿಸಿ, ಸಂಜಯ ಬಿ.ಎಸ್. ಕಾರ್ಯಕ್ರಮ ನಿರೂಪಿಸಿದರು.