ಬಿಜೆಪಿ ಹಿಂದುಳಿದ ವರ್ಗ ಮೋರ್ಚಾ ವಿಶೇಷ ಸಭೆ

0

ಬಂಟ್ವಾಳ: ರಾಜ್ಯ ರಾಜಕಾರಣದಲ್ಲಿ ಹೊಸ ತಿರುವನ್ನು ಪಡೆಯುವಂತೆ ಮಾಡಲು ಹಿಂದುಳಿದ ವರ್ಗಗಳ ಮೋರ್ಚಾವನ್ನು ಸಂಘಟನಾತ್ಮಕವಾಗಿ ಗಟ್ಟಿಗೊಳಿಸಲಾಗುವ ಉದ್ದೇಶದಿಂದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.

ಅವರು ಬಿಸಿರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಹಿಂದುಳಿದ ವರ್ಗಗಳ ಪ್ರಮುಖರ ವಿಶೇಷ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಅ.30 ರಂದು ಗುಲ್ಬರ್ಗ ದಲ್ಲಿ ನಡೆಯುವ ಹಿಂದುಳಿದ ಮೋರ್ಚಾದ ಸಮಾವೇಶ ಕಾರ್ಯಕ್ರಮ ಯಶಸ್ವಿಗೊಳಿಸುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ಮೋರ್ಚಾದ ವಿಶೇಷ ಸಭೆಯನ್ನು ಹಮ್ಮಿಕೊಂಡು ಮುಕ್ತ ಚರ್ಚೆಗಳನ್ನು ಮಾಡಲಾಗುತ್ತಿದೆ. ಸಮಾವೇಶದಲ್ಲಿ ದ.ಕ.ಜಿಲ್ಲೆಯಿಂದ ಕನಿಷ್ಠ 5000 ಸಾವಿರ ಜನ ಸಮಾವೇಶದಲ್ಲಿ ಭಾಗಿಯಾಗಬೇಕು ಎಂಬ ನಿಟ್ಟಿನಲ್ಲಿ ಪೂರ್ವತಯಾರಿಗಳು ನಡೆಯುತ್ತಿದೆ.

ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರ ಹಿಂದುಳಿದ ವರ್ಗದ ಅಭಿವೃದ್ದಿಗಾಗಿ ವಿವಿಧ ಯೋಜನೆ ಗಳನ್ನು ಪರಿಣಾಮ ಕಾರಿಯಾಗಿ ಜಾರಿ‌ಮಾಡಿದೆ. ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸುವ ಉದ್ದೇಶದಿಂದ ಹೈಕಮಾಂಡ್ ನ ಸೂಚನೆಯಂತೆ, ವಿವಿಧ ಮೊರ್ಚಾಗಳ ಹಾಗೂ ಪಾರ್ಟಿಯ ಕಾರ್ಯಕ್ರಮ ಗಳು ಬೇರೆ ಬೇರೆ ಕಡೆಗಳಲ್ಲಿ ಮಾಡಲು ನಿಶ್ಚಯಿಸಲಾಗಿದೆ. ನಿರಂತರವಾಗಿ ಹಿಂದುಳಿದ ವರ್ಗ ದವರಿಗೆ ಪ್ರಾದ್ಯಾನ್ಯತೆ ನೀಡುವ ಕೆಲಸ ಬಿಜೆಪಿ ಹಾಗೂ ಸರಕಾರ ಮಾಡಿದೆ.

ಹಿಂದುಳಿದ ವರ್ಗಗಳ ಸಮುದಾಯಗಳು ಪರಾಂಪರಿಕವಾಗಿ ಬಿಜೆಪಿ ಯನ್ನು ಬೆಂಬಲಿಸುತ್ತಾ ಬಂದಿದ್ದು, ಬಿಜೆಪಿ ಅಧಿಕಾರಕ್ಕೆ ಹಾಗೂ ಸಂಘಟನಾತ್ಮಕ ಅಭಿವೃದ್ಧಿಯಲ್ಲಿ ಹಿಂದುಳಿದ ಮೋರ್ಚಾ ದ ದೊಡ್ಡ ಕೊಡುಗೆ ಇದೆ ಎಂದು ಅವರು ಹೇಳಿದರು. ರಾಜ್ಯ ಬಿಜೆಪಿ ಹಿಂದುಳಿದ ಮೋರ್ಚಾದ ಅಧ್ಯಕ್ಷ ನೆಲನರೇಂದ್ರ ಬಾಬು, ಅವರು ಮಾತನಾಡಿ , ಕೋವಿಡ್ ಮಧ್ಯೆ ಯೂ ಸಂಘಟನೆ ಒತ್ತು ನೀಡಿದ್ದೇವೆ. ಮುಂದಿ‌ನ ಚುನಾವಣೆಯಲ್ಲಿ 150 ಪ್ಲಸ್ ಗುರಿ ತಲುಪಲು ಹಿಂದುಳಿದ ಮೋರ್ಚಾದ ಸಂಘಟಿತ ಹೋರಾಟ ಅಗತ್ಯ ವಿದೆ. ಅ ನಿಟ್ಟಿನಲ್ಲಿ ಸಮಾವೇಶಗಳ ಮೂಲಕ ಎಲ್ಲಾ ವರ್ಗದ ಜನರನ್ನು ಒಗ್ಗೂಡಿಸುವ ಕೆಲಸ ಮಾಡಲಾಗುತ್ತಿದೆ. ರಾಜ್ಯದಲ್ಲಿ 5 ತಂಡಗಳನ್ನು ರಚನೆ ಮಾಡಿಕೊಂಡು ಪ್ರವಾಸ ಮಾಡುತ್ತಿದ್ದೇವೆ, ಎಲ್ಲವನ್ನೂ ಚರ್ಚೆ ಮಾಡಿ ಅಮೂಲಕ ಸಮಾವೇಶ ಯಶಸ್ವಿಯಾಗಲು ಯೋಜನೆ ರೂಪಿಸಲಾಗುತ್ತದೆ . ಸಂಖ್ಯಾ ಬಲ ಅತೀ ಅಗತ್ಯವಿದೆ. ಮುಂದಿನ ಚುನಾವಣೆಗೆ ಸಜ್ಜಗೊಳ್ಳಬೇಕಾಗಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು , ಬಿಜೆಪಿ ಜಿಲ್ಲಾ ಅಧ್ಯಕ್ಷ ಸುದರ್ಶನ್ ಮೂಡಬಿದಿರೆ, ಮಾಜಿ ಶಾಸಕರಾದ ಎ. ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ವಿಶ್ವ ಕರ್ಮ ನಿಗಮದ ಮಾಜಿ ಅಧ್ಯಕ್ಷ ಬಾಬು ಪತ್ತಾರ್, ಹಿಂದುಳಿದ ವರ್ಗಗಳ ಕಾರ್ಯದರ್ಶಿ ವಿಠಲ ಪೂಜಾರಿ, ಪ್ರಧಾನ ಕಾರ್ಯದರ್ಶಿ ರಾಮ್ ದಾಸ ಬಂಟ್ವಾಳ, ನಿಗಮ ಮಾಜಿ ಅಧ್ಯಕ್ಷ ಸಂತೋಷ್ ರೈ ಬೋಳಿಯಾರು, ಕಿಯೋನಿಕ್ಸ್
ನಿಗಮದ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಜಿಲ್ಲಾ ಕಾರ್ಯದರ್ಶಿ ಭರತ್ ಕುಮಾರ್, ಮಂಗಳೂರು ಮಂಡಲ ಅಧ್ಯಕ್ಷ ಚಂದ್ರಹಾಸ ಪಂಡಿತ್ , ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ ರವೀಶ್ ಶೆಟ್ಟಿ, ಡೊಂಬಯ್ಯ ಅರಳ, ಪ್ರಮುಖರಾದ ರೂಪ ಡಿ.ಬಂಗೇರ, ಸತೀಶ್ ಕುಂಪಲ, ನವೀನ ಪಂಗಲ್ ಪಾಡಿ, ಚಂದ್ರಹಾಸ ಉಚ್ಚಿಲ ಮತ್ತಿತರರು ಪ್ರಮುಖರು ಉಪಸ್ಥಿತರಿದ್ದರು.

ಬಿಜೆಪಿ ಹಿಂದುಳಿದ ವರ್ಗ ಮೋರ್ಚಾದ ಜಿಲ್ಲಾ ಅಧ್ಯಕ್ಷ ಆರ್.ಸಿ.ನಾರಾಯಣ ರೆಂಜ ಅವರು ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here