ರಾಮಲ್ ಕಟ್ಟೆ: ಡಿಜಿಟಲ್ ಸೇವಾ ಕೇಂದ್ರ ಕಾಮನ್ ಸರ್ವಿಸ್ ಸೆಂಟರ್ ಉದ್ಘಾಟನೆ

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ  ತುಂಬೆ ಕಾರ್ಯಕ್ಷೇತ್ರ ವ್ಯಾಪ್ತಿಯ ರಾಮಲ್ ಕಟ್ಟೆ ಎಂಬಲ್ಲಿ ಡಿಜಿಟಲ್ ಸೇವಾ ಕೇಂದ್ರ ಕಾಮನ್ ಸರ್ವಿಸ್ ಸೆಂಟರ್ ಅನ್ನು ಪ್ರಾರಂಭಿಸಲಾಯಿತು.

ಸೇವಕೇಂದ್ರವನ್ನು ಉದ್ಘಾಟಿಸಿದ ತುಂಬೆ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಬಿ ತುಂಬೆ ಗ್ರಾಮ ವ್ಯಾಪ್ತಿಯ ಸಾರ್ವಜನಿಕರು ಇದರ ಸದುಪಯೋಗ ಪಡೆಯುವಂತೆ ತಿಳಿಸಿದರು.

ಯೋಜನೆಯ ಸೇವಾ ಕೇಂದ್ರಗಳ ಜಿಲ್ಲಾ ನೋಡಲ್ ಅಧಿಕಾರಿ ನವೀನ್ ಸೇವಾಕೇಂದ್ರಗಳಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ತುಂಬೆ ಗ್ರಾಮ ಪಂಚಾಯತ್ ಸದಸ್ಯ ಕಿಶೋರ್ ರಾಮಲ್ ಕಟ್ಟೆ, ಯೋಜನೆಯ ತುಂಬೆ ಒಕ್ಕೂಟದ ಅಧ್ಯಕ್ಷ ನವೀನ್, ಸೇವಕೇಂದ್ರಗಳ ಬಂಟ್ವಾಳ ತಾಲೂಕು ನೋಡಲ್ ಅಧಿಕಾರಿ ಪ್ರಸಾದ್, ತುಂಬೆ ವಲಯ ಮೇಲ್ವಿಚಾರಕಿ ಮಮತಾ ಸಂತೋಷ್, ಮಾಜಿ ಕೇಂದ್ರ ಒಕ್ಕೂಟದ ಅಧ್ಯಕ್ಷ ಮಾಧವ ಒಳವೂರ್, ಒಕ್ಕೂಟದ ಸೇವಾ ಪ್ರತಿನಿಧಿ ಅನಿತಾ , ಸೇವ ಕೇಂದ್ರದ ಸಿಬ್ಬಂದಿ ಶಶಿಕಲಾ , ತುಂಬೆ ಒಕ್ಕೂಟದ ಪದಾಧಿಕಾರಿಗಳು, ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here