ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ತಾಲೂಕಿನ ಪೊಳಲಿ ವಲಯದ ಕೊಡ್ಮಾಣ್ ಕಾರ್ಯಕ್ಷೇತ್ರದಲ್ಲಿ ನೂತನವಾಗಿ ರಚನೆಗೊಂಡ, ಅಮ್ಮ ಶ್ರೀ ಜ್ಞಾನವಿಕಾಸ ಕೇಂದ್ರವನ್ನು ಜಿಲ್ಲೆಯ ನಿರ್ದೇಶಕ ಸತೀಶ್ ಶೆಟ್ಟಿ ದೀಪಾ ಪ್ರಜ್ವಲನೆ ಮಾಡುವುದರ ಮೂಲಕ ಉದ್ಘಾಟಿಸಿ, ಜ್ಞಾನವಿಕಾಸ ಕಾರ್ಯಕ್ರಮದ, ದ್ಯೆಯೋದ್ದೇಶ ಅಮ್ಮನವರ ಆಶಯ, ಮಹಿಳಾ ಸಬಲೀಕರಣದ ಬಗ್ಗೆ, ಮಹಿಳೆಯರ ಆರೋಗ್ಯದ ಬಗ್ಗೆ ಮಾಹಿತಿ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೇರಾಮಜಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಕರ್ಕೇರ ವಹಿಸಿದರು. ಮುಖ್ಯ ಅತಿಥಿಗಳಾಗಿ ಮಾತನಾಡಿದ ಮೇರಾಮಜಲು ವಿದ್ಯಾಯುವಕ ಮಂಡಲದ ಅಧ್ಯಕ್ಷ ಜಯರಾಮ್ ಶೆಟ್ಟಿ ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಲು ಇದೊಂದು ಉತ್ತಮ ಅವಕಾಶ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪೊಳಲಿ ವಲಯದ, ವಲಯ ಅಧ್ಯಕ್ಷ ಜನಾರ್ದನ ಆಚಾರ್ಯ ಹಾಗೂ ಒಕ್ಕೂಟದ ಅಧ್ಯಕ್ಷ ಉಮೇಶ್ ಆಳ್ವ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮವನ್ನು ಮೇಲ್ವಿಚಾರಕಿ ಹರಿಣಾಕ್ಷಿ ಸ್ವಾಗತಿಸಿ. ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ ಸಪ್ನ ನಿರೂಪಿಸಿ, ಸೇವಾಪ್ರತಿನಿಧಿ ಶೈಲಜಾ ಧನ್ಯವಾದವಿತ್ತರು.