ಕೃಷಿ ಭೂಪರಿವರ್ತನೆ ತಿದ್ದುಪಡಿ ಮಸೂದೆ ಸುಗ್ರೀವಾಜ್ಞೆ ಮೂಲಕ ಜಾರಿಗೆ ತೀರ್ಮಾನ

0

ಬೆಂಗಳೂರು:ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗೆ ಬಳಸಿಕೊಳ್ಳಲು ಅವಕಾಶ ಕಲ್ಪಿಸುವ ಭೂಪರಿವರ್ತನೆ ತಿದ್ದುಪಡಿ ಮಸೂದೆಯನ್ನು ಸುಗ್ರೀವಾಜ್ಞೆಯ ಮೂಲಕ ಜಾರಿಗೊಳಿಸಲು ನಿರ್ಧರಿಸಲಾಗಿದೆ’ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ರಾಜ್ಯದಲ್ಲಿರುವ ಲಕ್ಷಾಂತರ ಕಂದಾಯ ನಿವೇಶನಗಳನ್ನು ಭೂಪರಿವರ್ತನೆ ವ್ಯಾಪ್ತಿಗೆ ತರಲು ಉದ್ದೇಶಿಸಲಾಗಿದೆ.ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಸೆಕ್ಷನ್ 95ಕ್ಕೆ ತಿದ್ದುಪಡಿಯಿಂದ ಪರಿವರ್ತನೆಗಿದ್ದ ಅಡ್ಡಿ ಆತಂಕಗಳು ನಿವಾರಣೆಗೊಳ್ಳಲಿವೆ.ಇತ್ತೀಚೆಗೆ ನಡೆದ ಅಧಿವೇಶನದಲ್ಲಿ ಮಸೂದೆಗೆ ಅಂಗೀಕಾರ ಪಡೆಯಲು ಸಾಧ್ಯವಾಗಿಲ್ಲ.ಆದ್ದರಿಂದ ಸುಗ್ರೀವಾಜ್ಞೆ ಹೊರಡಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಅಶೋಕ್ ತಿಳಿಸಿದರು.
ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗೆ ಭೂಪರಿವರ್ತನೆ ಮಾಡಿಸಿಕೊಳ್ಳಲು ಅರ್ಜಿ ನೀಡಿದ 7 ದಿನಗಳಲ್ಲಿ ಅರ್ಜಿಯನ್ನು ಇತ್ಯರ್ಥಗೊಳಿಸಲಾಗುವುದು.ಗ್ರಾಮೀಣ ಪ್ರದೇಶದಲ್ಲಿ ಪರಿವರ್ತನೆಗೆ ಅರ್ಜಿ ಸಲ್ಲಿಸಿದ 30 ದಿನಗಳಲ್ಲಿ ಅವರ ಉದ್ದೇಶಗಳಿಗೆ ಅನುಮತಿ ಸಿಗಲಿದೆ ಎಂದು ಸಚಿವರು ಹೇಳಿದರು.

ಮಸೂದೆಯ ಮುಖ್ಯ ಅಂಶಗಳು :

ಮಹಾ ಯೋಜನೆ (ಮಾಸ್ಟರ್ ಪ್ಲಾನ್) ಅಥವಾ ನಗರ ಯೋಜನಾ ಪ್ರಾಧಿಕಾರದ ಮಂಜೂರಾತಿ ಅನ್ವಯ ಕೃಷಿ ಭೂಮಿ ಅಥವಾ ಅದರ ಭಾಗವನ್ನು ಯಾವುದಾದರೂ ಇತರ ಉದ್ದೇಶಕ್ಕೆ ಬಳಸಲು ಇಚ್ಚಿಸುವವರು ನಿಗದಿಪಡಿಸಿದ ದಂಡ ಪಾವತಿಸಿ ಪ್ರಮಾಣಪತ್ರ ಸಹಿತ ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಬೇಕು.ಹೀಗೆ ಸಲ್ಲಿಕೆಯಾದ ಅರ್ಜಿಗಳಿಗೆ ಏಳು ದಿನಗಳ ಒಳಗೆ ಜಿಲ್ಲಾಧಿಕಾರಿ ಮಂಜೂರಾತಿ ಆದೇಶ ಹೊರಡಿಸಬೇಕು.೧೫ ದಿನ ಕಳೆದರೂ ಜಿಲ್ಲಾಧಿಕಾರಿ ಅರ್ಜಿಗಳನ್ನು ವಿಲೇವಾರಿ ಮಾಡದಿದ್ದರೆ, ಕೃಷಿಯೇತರ ಭೂಮಿಯಾಗಿ ಪರಿವರ್ತನೆ ಆಗಿದೆ ಎಂದು ಪರಿಭಾವಿಸಿಕೊಳ್ಳಬಹುದು’ ಎಂದು ಅಂಶ ತಿದ್ದುಪಡಿಯಾದ ಮಸೂದೆಯಲ್ಲಿದೆ.

ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗೆ ಭೂಪರಿವರ್ತನೆ ಮಾಡಿಸಿಕೊಳ್ಳಲು ಅರ್ಜಿ ನೀಡಿದ 7 ದಿನಗಳಲ್ಲಿ ಅರ್ಜಿಯನ್ನು ಇತ್ಯರ್ಥ ಗೊಳಿಸಲಾಗುವುದು.ಗ್ರಾಮೀಣ ಪ್ರದೇಶದಲ್ಲಿ ಪರಿವರ್ತನೆಗೆ ಅರ್ಜಿ ಸಲ್ಲಿಸಿದ 30 ದಿನಗಳಲ್ಲಿ ಅವರ ಉದ್ದೇಶಗಳಿಗೆ ಅನುಮತಿ ಸಿಗಲಿದೆ
ಆರ್.ಅಶೋಕ್
ಕಂದಾಯ ಸಚಿವರು

LEAVE A REPLY

Please enter your comment!
Please enter your name here