ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ) ಬಂಟ್ವಾಳ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ತಾಲೂಕು ಇದರ ವತಿಯಿಂದ ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ನವ ಜೀವನ ಸದಸ್ಯರ ಸಮಾವೇಶ ಹಾಗೂ ಕೇಂದ್ರ ಒಕ್ಕೂಟಗಳ ಪದಗ್ರಹಣ ಸಮಾರಂಭ ಅ.9 ಸ್ಪರ್ಶ ಕಲಾಮಂದಿರ ಬಿಸಿ ರೋಡ್ ಇಲ್ಲಿ ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆಯಲ್ಲಿ ರೊನಾಲ್ಡ್ ಡಿಸೋಜ ಇವರ ಅಧ್ಯಕ್ಷತೆಯಲ್ಲಿ ಜರುಗಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ನೆರವೇರಿಸಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಹೊಸ ಕ್ರಾಂತಿ ಉಂಟಾಗಿದೆ. ಬಡವರು ಯಾವುದೇ ಆದಾರ ಪತ್ರ ಇಲ್ಲದೆ ಲಕ್ಷಗಟ್ಟಲೆ ಬ್ಯಾಂಕ್ ನಿಂದ ಸಾಲವನ್ನು ಪಡೆದು ಉತ್ತಮ ಜೀವನ ನಡೆಸುತ್ತಿದ್ದಾರೆ ಎಂದರು.
ನವ ಜೀವನ ಸದಸ್ಯರಿಗೆ ಅಭಿನಂದನೆಯನ್ನು ಸಲ್ಲಿಸಿದ ಮಾಜಿ ಸಚಿವ ರಮನಾಥ ರೈ ಯಾವುದೇ ಕೆಲಸವನ್ನು ಯಶಸ್ವಿಯಾಗಿ ಮಾಡಿದಾಗ ಮಾತ್ರ ಯಶಸ್ವಿಯಾಗಳು ಸಾಧ್ಯ ಎಂದು ಹೇಳಿದರು. ಕೇಂದ್ರ ಒಕ್ಕೂಟಗಳ ಜವಾಬ್ದಾರಿ ಹಸ್ತಾಂತರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲೆ ಒಂದರ ನಿರ್ದೇಶಕ ಸತೀಶ್ ಶೆಟ್ಟಿ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ರುಕ್ಮಯ ಪೂಜಾರಿ, ಕೆಯ್ಯೂರು ನಾರಾಯಣ ಭಟ್, ಕಿರಣ್ ಹೆಗ್ಡೆ,ಬಾಲಕೃಷ್ಣ ಆಳ್ವ, ಕೃಷ್ಣಕುಮಾರ್ ಪೂಂಜ,ಪ್ರೊಫೆಸರ್ ತುಕಾರಾಮ್ ಪೂಜಾರಿ,ಮಾಧವ ವಳವೊರು,ಕೃಷ್ಣಪ್ಪ ಪೂಜಾರಿ ಅಲ್ಲಿಪಾದೆ, ಚಂದಪ್ಪ ಮೂಲ್ಯ, ಸದಾನಂದ ನಾವುರ, ಚಿದಾನಂದ ರೈ ಕಕ್ಯ, ಯೋಜನಾಧಿಕಾರಿಗಳಾದ ಜಯಾನಂದ ಪಿ, ಹಾಗೂ ಚೆನ್ನಪ್ಪ ಗೌಡ, ಮೊದಲಾದವರು ಉಪಸ್ಥಿತರಿದ್ದರು. ಮೇಲ್ವಿಚಾರಕರು ಸೇವಾ ಪ್ರತಿನಿಧಿಗಳು ಹಾಗೂ ನವಾ ಜೀವನ ಸದಸ್ಯರು ಹಾಗೂ ಗ್ರಾಮ ಅಭಿವೃದ್ಧಿ ಯೋಜನೆಯ ಸದಸ್ಯರು ಬಾಗವಸಿದ್ದರು. ಈ ಸಂದರ್ಭದಲ್ಲಿ ಬಂದ ಅತಿಥಿಗಳನ್ನು ಯೋಜನಾಧಿಕಾರಿಗಳಾದ ಚೆನ್ನಪ್ಪ ಗೌಡ ಸ್ವಾಗತಿಸಿ ಜಯಾನಂದ ಪಿ ಅಭಿನಂದಿಸಿದರು.