ವಿಟ್ಲ: ಕಾಂಗ್ರೆಸ್ ವರಿಷ್ಠ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಅ.11ರಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಹರ್ತಿಕೋಟೆ ಗ್ರಾಮದಿಂದ ಸಾಣಿಕೆರೆಗೆ ಪ್ರದೇಶದಲ್ಲಿ ಸಾಗಿದ್ದು, ಈ ಸಂದರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಮಾಜಿ ಸಚಿವ ಬಿ.ರಮಾನಾಥ ರೈ ರವರು ರಾಹುಲ್ ಗಾಂಧಿ ಅವರ ಜತೆ ಹೆಜ್ಜೆ ಹಾಕಿದರು.
ಅ.10ರಿಂದ ನಡೆದ ಯಾತ್ರೆಯಲ್ಲಿ ಹಿರಿಯೂರು ಭಾಗದಲ್ಲಿ ನಡೆದ ಯಾತ್ರೆಗೆ ಬಿ.ರಮಾನಾಥ ರೈ ಅವರು ಉಸ್ತುವಾರಿಯಾಗಿದ್ದು, ಮುಂದೆ ಕರ್ನಾಟಕ ರಾಜ್ಯದಲ್ಲಿ ಸಾಗಲಿರುವ ಯಾತ್ರೆಯಲ್ಲಿ ಪೂರ್ತಿಯಾಗಿ ಪಾಲ್ಗೊಳ್ಳಲಿದ್ದಾರೆ. ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಹಲವು ವಿಚಾರಗಳ ಕುರಿತು ರೈ ಅವರು ಜತೆ ಚರ್ಚೆ ನಡೆಸಿದರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ರಾಷ್ಟ್ರ, ರಾಜ್ಯ ಮಟ್ಟದ ಹಲವು ನಾಯಕರು ಪಾಲ್ಗೊಂಡಿದ್ದರು. ಅ.11ರಂದು ಸಾಗಿದ ಯಾತ್ರೆಯಲ್ಲಿದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಡಾ| ಮಂಜುನಾಥ ಭಂಡಾರಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಜಿಲ್ಲಾ ಕಾಂಗ್ರೆಸ್ ಸಹಕಾರಿ ಘಟಕದ ಸಂಚಾಲಕ ಸುದರ್ಶನ್ ಜೈನ್, ಪ್ರಮುಖರಾದ ಪದ್ಮನಾಭ ಕೋಟ್ಯಾನ್, ಆರ್.ಕೆ.ಪೃಥ್ವಿರಾಜ್ ಮೊದಲಾದವರು ಉಪಸ್ಥಿತರಿದ್ದರು.