ಬಂಟ್ವಾಳ: ಇಲ್ಲಿನ ಬಿ.ಸಿ.ರೋಡ್ -ಅಡ್ಡಹೊಳೆ ನಡುವೆ ಚತುಷ್ಪಥ ರಸ್ತೆ ನಿರ್ಮಾಣಕ್ಕಾಗಿ ಕಲ್ಲಡ್ಕದಲ್ಲಿ ನಡೆಯುತ್ತಿರುವ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ವೇಳೆ ಪಿಲ್ಲರ್ ಗೆ ಜೋಡಿಸಿ ಅಳವಡಿಸಿದ್ದ ಕಬ್ಬಿಣದ ಸರಳು ಗುರುವಾರ ದಿಢೀರನೆ ಬಾಗಿ ರಸ್ತೆಗೆ ಬಿದ್ದ ಪರಿಣಾಮ ಕೆಲಹೊತ್ತು ಸಂಚಾರಕ್ಕೆ ಅಡ್ಡಿಯಾಯಿತು.
ಕಳೆದ ಒಂದು ವರ್ಷದಿಂದ ಕಲ್ಲಡ್ಕ ಪೇಟೆಯಲ್ಲಿ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಮಳೆಗೆ ಹೊಂಡಮಯ ಕೆಸರು ಮತ್ತು ಬೇಸಿಗೆಯಲ್ಲಿ ಧೂಳಿನ ಹಾವಳಿ ಬಗ್ಗೆ ಸುದ್ದಿಯಾಗುತ್ತಲೇ ಇದೆ. ಇದೀಗ ಎತ್ತರದ ಮೇಲ್ಸೇತುವೆ ನಿರ್ಮಾಣಕ್ಕೆ ಪಿಲ್ಲರ್ ಕಾಮಗಾರಿ ನಡೆಯುತ್ತಿದ್ದು, ಒಂದು ಪಿಲ್ಲರ್ ಗೆ ಜೋಡಿಸಿದ್ದ ಕಬ್ಬಿಣದ ಸರಳು ಬಾಗಿ
ದಿಢೀರನೆ ಹೆದ್ದಾರಿಗೆ ಬಾಗಿ ಬಿದ್ದಿದೆ. ಗರಿಷ್ಟ ಸಂಖ್ಯೆಯಲ್ಲಿ ವಾಹನ ಸಂಚಾರ ಇರುವ ಈ ರಸ್ತೆಯಲ್ಲಿ ಯಾವುದೇ ವಾಹನ ಸಂಚಾರ ಇಲ್ಲದ ವೇಳೆ ಕಬ್ಬಿಣ ಸರಳು ರಸ್ತೆಗೆ ವಾಲಿಕೊಂಡು ಬಿದ್ದ ಪರಿಣಾಮ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.
ಈ ನಡುವೆ ಇಂತಹ ಕಳಪೆ ಗುಣಮಟ್ಟದ ಕಾಮಗಾರಿ ಬಗ್ಗೆ ತಜ್ಞ ಎಂಜಿನಿಯರ್ ಸಹಿತ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ತನಿಖೆ ನಡೆಸಬೇಕು. ಈ ಕಾಮಗಾರಿಯಲ್ಲಿ ಯಾರಿಗೆ ಎಷ್ಟು ಪರ್ಸೆಂಟ್ ಹೋಗಿದೆ…? ಎಂಬ ಪ್ರಶ್ನೆಯೂ ಜನರಲ್ಲಿ ಮೂಡಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.