ಬಂಟ್ವಾಳ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ – 2 ಗ್ರಾಮ್ಸ್ ಮಂಗಳೂರು ಇವರ ಸಹಯೋಗದಲ್ಲಿ” ಜಲ್ ಜೀವನ್ ಮಿಷನ್ ” ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅರಳ ಗ್ರಾಮ ಪಂಚಾಯತ್ ನಲ್ಲಿ FTK ತರಭೇತಿಯನ್ನು ಅ.15ರಂದು ಆಯೋಜಿಸಲಾಗಿತ್ತು. ಈ ತರಬೇತಿಯಲ್ಲಿ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷೆ ಪ್ರೇಮˌ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧರ್ಮರಾಜ್ˌ ನೀರು ನೈರ್ಮಲ್ಯ ಸಮಿತಿಯ ಸದಸ್ಯರು , ನೀರು ಗಂಟಿಗಳುˌ ಪಂಚಾಯತ್ ಸಿಬ್ಬಂದಿಗಳು ಭಾಗವಹಿಸಿದ್ದರು.
ತರಬೇತಿಯನ್ನು ಗ್ರಾಮ್ಸ್ ರಾಯಚೂರು ಸಂಸ್ಥೆಯ ಜಲ ಜೀವನ್ ಮಿಷನ್ ಬಂಟ್ವಾಳ ತಾಲೂಕಿನ ಸಮುದಾಯ ಸಂಘಟಕಿ ಗುಣವತಿ ಮತ್ತು ವಿಲ್ಮಾ ಆಯೋಜಿಸಿದರು.