ಬಂಟ್ವಾಳ ಮಹಿಳಾ ಬ್ಲಾಕ್ ಕಾಂಗ್ರೆಸ್ ಇದರ ವತಿಯಿಂದ ಗೋ ಪೂಜೆ

0

ಬಂಟ್ವಾಳ: ಮಹಿಳಾ ಬ್ಲಾಕ್ ಕಾಂಗ್ರೆಸ್ ಇದರ ವತಿಯಿಂದ ದೀಪಾವಳಿ ಪ್ರಯುಕ್ತ ಗೋ ಪೂಜೆಯನ್ನು ಬಡಗ ಕಾಜೆಕಾರ್ ಗ್ರಾಮದ ಸುಧಾಕರ್ ಶಣೈ ಖಂಡಿಗ ಇವರ ಮನೆಯಲ್ಲಿ ಅ.27ರಂದು ಮಾಜಿ ಸಚಿವ ಬಿ. ರಮಾನಾಥ ರೈ ಯವರ ನೇತೃತ್ವದಲ್ಲಿ ನಡೆಸಿದರು.

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಸುಧಾಕರ್ ಶಣೈ,ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲವೀನಾ ವಿಲ್ಮಾ ಮೋರಸ್,ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಬೇಬಿ ಕುಂದರ್,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಕೆಪಿಸಿಸಿ ಸದಸ್ಯರಾದ ಪಿಯೂಸ್ ರೊಡ್ರಿಗಸ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ,ಮಾಯಿಲಪ್ಪ ಸಾಲ್ಯಾನ್, ಸುಕನ್ಯಾ ಶಣೈ,ಮಾಜಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಅಬ್ದುಲ,ಪದ್ಮನಾಭ ಸಾವಂತ್ ವಾಮದಪದವು ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here