ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮ ಪಂಚಾಯತ್ ನಲ್ಲಿ FTK ತರಬೇತಿ

0

ಬಂಟ್ವಾಳ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ – 2 ಗ್ರಾಮ್ಸ್ ಮಂಗಳೂರು ಇವರ ಸಹಯೋಗದಲ್ಲಿ” ಜಲ್ ಜೀವನ್ ಮಿಷನ್ ” ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮ ಪಂಚಾಯತ್ ನಲ್ಲಿ FTK ತರಬೇತಿ ಅ.31ರಂದು ಆಯೋಜಿಸಲಾಗಿತ್ತು. ಈ ತರಭೇತಿಯಲ್ಲಿ ಗ್ರಾಮ ಪಂಚಾಯತ್ ನ ಅಧ್ಯಕ್ಷ ಚಂದ್ರಹಾಸˌ ಉಪಾಧ್ಯಕ್ಷೆ ವೀಣಾ ˌ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಾಲಿನಿ.ಬಿ.ವಿˌ ನೀರು ನೈರ್ಮಲ್ಯ ಸಮಿತಿಯ ಸದಸ್ಯರು , ನೀರು ಗಂಟಿಗಳುˌ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ತರಬೇತಿಯನ್ನು ಗ್ರಾಮ್ಸ್ ರಾಯಚೂರು ಸಂಸ್ಥೆಯ ಜಲ ಜೀವನ್ ಮಿಷನ್ ಬಂಟ್ವಾಳ ತಾಲೂಕಿನ ಸಮುದಾಯ ಸಂಘಟಕರಾದ ಗುಣವತಿ ಮತ್ತು ವಿಲ್ಮಾರವರು ಆಯೋಜಿಸಿದರು
.

LEAVE A REPLY

Please enter your comment!
Please enter your name here