ನೂತನವಾಗಿ ನಿರ್ಮಾಣ ವಾಗಲಿರುವ ಬಂಟ್ವಾಳ ಜಕ್ರಿಬೆಟ್ಟುವಿನಿಂದ ನರಿಕೊಂಬು ಸಂಪರ್ಕದ ಸೇತುವೆ ಮತ್ತು ಅಣೆಕಟ್ಟು ನಿರ್ಮಾಣ ಸ್ಥಳಕ್ಕೆ ಶಾಸಕ ರಾಜೇಶ್‌ ನಾಯ್ಕ್ ಭೇಟಿ

0

ಬಂಟ್ವಾಳ : 135 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಬಂಟ್ವಾಳ ಜಕ್ರಿಬೆಟ್ಟುವಿನಿಂದ ನರಿಕೊಂಬು ಸಂಪರ್ಕದ ಸೇತುವೆ ಮತ್ತು ಅಣೆಕಟ್ಟು ನಿರ್ಮಾಣದ ಜಾಗವನ್ನು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ವೀಕ್ಷಿಸಿದರು.


ಬಳಿಕ ಮಾತನಾಡಿದ ಅವರು ಈ ಸೇತುವೆ ಮತ್ತು ಅಣೆಕಟ್ಟು ನಿರ್ಮಾಣ ದಿಂದ ಎರಡು ಭಾಗದ ಜನರಿಗೆ ಪ್ರಯೋಜನವಾಗಲಿದ್ದು, ಕೃಷಿ ಮತ್ತು ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ.


ಈ ಕಾಮಗಾರಿಯ ಶಿಲಾನ್ಯಾಸಕ್ಕಾಗಿ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಆಮಂತ್ರಿಸುವ ಯೋಚನೆ ಮಾಡಿದ್ದೇವೆ. ಅದಷ್ಟು ಬೇಗ ಶಿಲಾನ್ಯಾಸ ನೆರವೇರಿಸಿ ಕಾಮಗಾರಿಯನ್ನು ಪ್ರಾರಂಭ ಮಾಡಲಿದ್ದೇವೆ ಎಂದು ಅವರು ತಿಳಿಸಿದರು.

LEAVE A REPLY

Please enter your comment!
Please enter your name here