ಬಂಟ್ವಾಳ: ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಮ್ಮುಂಜೆ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ನ.12, 13ರಂದು ನಡೆಯಲಿದ್ದು, ಇದರ ಪೂರ್ವಭಾವಿ ಸಿದ್ಧತಾ ಸಭೆ ಶಾಲೆಯಲ್ಲಿ ನಡೆಯಿತು.
ಈ ಸಂದರ್ಭ ಅಧ್ಯಕ್ಷತೆ ವಹಿಸಿ ಮಾತನಾಡಿದ ಸ್ವಾಗತ ಸಮಿತಿ ಅಧ್ಯಕ್ಷ ಉಮೇಶ್ ಸಾಲ್ಯಾನ್, ಕಾರ್ಯಕ್ರಮದ ಯಶಸ್ಸಿಗೆ ಸರ್ವರ ಸಹಕಾರ ಕೋರಿದರು.
ತಾಲೂಕು ಸಾಹಿತ್ಯ ಪರಿಷತ್ತು ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಗೌರವ ಕಾರ್ಯದರ್ಶಿ ವಿ ಸು ಭಟ್ ಮತ್ತು ರಮಾನಂದ ನೂಜಿಪ್ಪಾಡಿ, ವಿಟ್ಲ ಹೋಬಳಿ ಅಧ್ಯಕ್ಷ ಗಣೇಶ ಪ್ರಸಾದ ಪಾಂಡೇಲು,, ಮಾಜಿ ಅಧ್ಯಕ್ಷ ಜಯಾನಂದ ಪೆರಾಜೆ, ಪದಾಧಿಕಾರಿಗಳಾದ ಉಮ್ಮರ್ ಮಂಚಿ, ಸಂಕಪ್ಪ ಶೆಟ್ಟಿ, ಅನೀಶ್ ಬಾಳಿಕೆ ವಿವಿಧ ವಿಚಾರಗಳ ಕುರಿತು ಸಲಹೆ ಸೂಚನೆ ನೀಡಿದರು.
ಈ ಸಂದರ್ಭ ಸ್ವಾಗತ ಸಮಿತಿ ಪದಾಧಿಕಾರಿಗಳು ಹಾಗೂ ಗಣ್ಯರಾದ ಎ ಮಂಜಯ್ಯ ಶೆಟ್ಟಿ, ಸಂಪತ್ ಕುಮಾರ್ ಶೆಟ್ಟಿ, ಶಂಕರ ಶೆಟ್ಟಿ, ಎ ದೇವದಾಸ್ ಹೆಗ್ಡೆ, ನಿವೃತ್ತ ಮುಖ್ಯ ಶಿಕ್ಷಕಿ ಲುವಿಝ ಕುಟಿನೊ, ಅಮುಂಜೆ ಶಾಲಾ ಮುಖ್ಯ ಶಿಕ್ಷಕಿ ಸುಗುಣ ಸಂಕಪ್ಪ ಶೆಟ್ಟಿ, ನವೀನ ಬೆಂಜನಪದವು, ಕರಿಯಂಗಳ ಗ್ರಾ ಪಂ ಅಧ್ಯಕ್ಷ ಚಂದ್ರಹಾಸ ಪಲ್ಲಿಪಾಡಿ, ಅಮುಂಜೆ ಗ್ರಾ ಪಂ ಅಧ್ಯಕ್ಷ ವಾಮನ ಆಚಾರ್ಯ, ಅಭಿವೃದ್ಧಿ ಅಧಿಕಾರಿ ಮಾಲಿನಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು. ಪ್ರಧಾನ ಸಂಚಾಲಕ ಅಬೂಬಕ್ಕರ್ ಅಮುಂಜೆ ಮಾಹಿತಿ ನೀಡಿದರು, ಪ್ರಧಾನ ಕಾರ್ಯದರ್ಶಿ ಬಿ ಜನಾರ್ದನ ಅಮುಂಜೆ ಸ್ವಾಗತಿಸಿ, ಸ್ವಾಗತ ಸಮಿತಿಯ ಜವಾಬ್ದಾರಿಯನ್ನು ತಿಳಿಸಿದರು.ಸಂಚಾಲಕ ಡಿ ಎ ಹರೀಶ್ ರಾವ್ ವಂದಿಸಿದರು.