ಬಡಗಕಜೆಕಾರು ಮತ್ತು ತೆಂಕಕಜೆಕಾರು ಗ್ರಾಮವನ್ನು ಹರ್ ಘರ್ ಜಲ್ ಗ್ರಾಮವಾಗಿ ಘೋಷಣೆ

0

ಬಂಟ್ವಾಳ : ದಕ್ಷಿಣ ಕನ್ನಡ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮಂಗಳೂರು ಇದರ ವತಿಯಿಂದ ಬಂಟ್ವಾಳ ತಾಲೂಕಿನ ಬಡಗಕಜೆಕಾರು ಮತ್ತು ತೆಂಕಕಜೆಕಾರು ಗ್ರಾಮವನ್ನು ಹರ್ ಘರ್ ಜಲ್ ಗ್ರಾಮವಾಗಿ ಘೋಷಣೆ ಮಾಡಲಾಗಿದೆ. (ಪ್ರತೀ ಮನೆಗೆ ಕಾರ್ಯಾತ್ಮಕ ನಳ ಸಂಪರ್ಕ) ಜಲ ಜೀವನ್ ಮಿಷನ್ ಆಶಯದಂತೆ ಎಲ್ಲಾ ಮನೆಗಳಿಗೂ ನಳ್ಳಿ ಸಂಪರ್ಕ ಕಲ್ಪಿಸಲಾಗಿದ್ದು ಈಗ ಪಂಚಾಯತ್ ತನ್ನ ಗುರಿ ಮುಟ್ಟಿದೆ. ನ.7 ರಂದು ಬಡಗಕಜೆಕಾರುಗ್ರಾಮ ಪಂಚಾಯತ್ ನಲ್ಲಿ ಹರ್ ಘರ್ ಜಲ್ ಘೋಷಣೆ ಕಾರ್ಯಕ್ರಮ ನಡೆಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಆಸ್ಮಾ, ಉಪಾಧ್ಯಕ್ಷರಾದ ಡೀಕಯ್ಯ ಬಂಗೇರ, ಪಂ. ಅ. ಅಧಿಕಾರಿಗಳು ˌ ಪಂಚಾಯತ್ ಸದಸ್ಯರುˌ ಪಂಪು ಚಾಲಕರುˌ ಪಂಚಾಯತ್ ಸಿಬ್ಬಂದಿಗಳುˌ ಆಶಾ ಕಾರ್ಯಕರ್ತೆಯರುˌ ಆರೋಗ್ಯ ಸಹಾಯಕಿಯರು ˌ ಗ್ರಾಮಸ್ಥರು ಹಾಗೂ ಫಲಾನುಭವಿಗಳ ಸಮ್ಮುಖದಲ್ಲಿ ಬಡಗಕಜೆಕಾರು, ತೆಂಕಕಜೆಕಾರು ಈ ಎರಡು ಗ್ರಾಮಗಳನ್ನು ಹರ್ ಘರ್ ಜಲ್ ಗ್ರಾಮವೆಂದು ಘೋಷಣೆ ಮಾಡಲಾಯಿತು ಪಂಚಾಯತ್ ಅಧ್ಯಕ್ಷರು ಮಾತನಾಡಿ ಜಲಜೀವನ್ ಮಿಷನ್ ನ ಅನುಷ್ಠಾನ ಯಶಸ್ವಿಯಾಗಿದೆ . ಸರ್ಕಾರದ ಈ ಯೋಜನೆ ಗ್ರಾಮದ ಪ್ರತಿಯೋಬ್ಬರಿಗೂ ಶುದ್ಧ ಮತ್ತು ಸುರಕ್ಷಿತ ನೀರು ಒದಗಿಸಿ ಕೊಡುವಲ್ಲಿ ಸಫಲವಾಗಿದೆ ಆದುದರಿಂದ ಎರಡು ಗ್ರಾಮಗಳನ್ನು ಹರ್ ಘರ್ ಜಲ್ ಗ್ರಾಮವೆಂದು ಘೋಷಿಸಲು ಸಂತೋಷವಾಗುತ್ತದೆ ಎಂದು ತಿಳಿಸಿದರು.
ಜಲಜೀವನ್ ಮಿಷನ್ ನ ಯೋಜನಾ ವ್ಯವಸ್ಥಾಪಕ ವಿಘ್ನೇಶ್ ರಾಜ್ˌ ಅನುಷ್ಠಾನ ಬೆಂಬಲ ಸಂಸ್ಥೆಯ ತಂಡದ ನಾಯಕರಾದ ಶಿವರಾಮ್, ಚರಣ್ ರಾಜ್ˌ ಅಶ್ವಿನ್, ಅನುಷ್ಠಾನ ಬೆಂಬಲ ಸಂಸ್ಠೆ – 2ನ ಸಿಬ್ಬಂದಿಗಳಾದ ವಿಲ್ಮಾ ಮತ್ತು ಚಂದ್ರಶೇಖರ್ ಉಪಸ್ಠಿತರಿದ್ದರು.

LEAVE A REPLY

Please enter your comment!
Please enter your name here