ಬಂಟ್ವಾಳ: ಬೈಕ್ ಸ್ಕಿಡ್ ಆಗಿ ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿ-ಸವಾರ ಮೃತ್ಯು

0

ಬಂಟ್ವಾಳ: ಬೈಕ್ ಸ್ಕಿಡ್ ಆಗಿ ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ತಲೆಗೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನ.17ರಂದು ನಡೆದಿದೆ.ಬ್ರಹ್ಮರಕೂಟ್ಲು‌ಕಳ್ಳಿಗೆ ನಿವಾಸಿ ಮುಜಾಮಿಲ್ ಮೃತಪಟ್ಟ ಯುವಕ.

ನ. 9ರಂದು ರಾತ್ರಿ ವೇಳೆ ಯಮಹಾ ಬೈಕ್  ಚಲಾಯಿಸಿಕೊಂಡು ವೇಳೆ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

ಬಂಟ್ವಾಳ ತಾಲೂಕು ತುಂಬೆ ಗ್ರಾಮದ ರಾಮಲ್ ಕಟ್ಟೆ ಎಂಬಲ್ಲಿ ಬೈಕ್ ಸ್ಕಿಡ್ ಆಗಿ ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ರಸ್ತೆ ಬಿದ್ದ ಪರಿಣಾಮ ತಲೆಗೆ ಗಂಭೀರ ವಾಗಿ ಗಾಯವಾಗಿತ್ತು. ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕ ದಲ್ಲಿ ಚಿಕಿತ್ಸೆ ನೀಡಲಾಗಿತ್ತು.ಆದರೆ ತಲೆಗೆ ಅತಿಯಾದ ಏಟಾದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಮೃತಪಟ್ಟ ಘಟನೆ ನಡೆದಿದೆ.

ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯ ಲ್ಲಿ ದೂರು ದಾಖಲಾಗಿದೆ

LEAVE A REPLY

Please enter your comment!
Please enter your name here