ಬಂಟ್ವಾಳ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ಸಂಘ ಸಂಸ್ಥೆಗಳಿಂದ ಕಾನೂನು ಕಾರ್ಯಗಾರ

0

ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ಅಖಿಲ ಭಾರತೀಯ ಅಧಿವಕ್ತಾ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದ ಬಂಟ್ವಾಳ ಘಟಕ ಮತ್ತು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ ) ದ. ಕ ಮತ್ತು ಉಡುಪಿ ಜಿಲ್ಲೆ ಇದರ ಬಂಟ್ವಾಳ ವಲಯದ ಸಂಯುಕ್ತ ಆಶ್ರಯದಲ್ಲಿ
ಸಂವಿಧಾನ ದಿನಾಚರಣೆಯ ಪ್ರಯುಕ್ತ ಕಾನೂನು ಕಾರ್ಯಗಾರವನ್ನು ನ.26 ರಂದು ಬೆಳಿಗ್ಗೆ 10.30ಕ್ಕೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಕೇಂದ್ರ ಸರಕಾರದ ಪರ ಜಿಲ್ಲಾ ನ್ಯಾಯವಾದಿಯಾದ ಶ್ರೀ ಪ್ರಸಾದ್ ಕುಮಾರ್ ರೈ ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮುಖ್ಯ ಅತಿಥಿಯಾಗಿ ಅಖಿಲ ಭಾರತೀಯ ಅಧಿವಕ್ತಾ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದ ಬಂಟ್ವಾಳ ಘಟಕದ ಗೌರವಾಧ್ಯಕ್ಷರು ರಾಜಾರಾಮ್ ನಾಯಕ್, ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ ) ದ. ಕ ಮತ್ತು ಉಡುಪಿ ಜಿಲ್ಲೆ ಇದರ ಬಂಟ್ವಾಳ ವಲಯದ ಅಧ್ಯಕ್ಷ ಹರೀಶ್ ಕುಂದರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಬಂಟ್ವಾಳದ ಹಿರಿಯ ವಕೀಲ ಪ್ರಕಾಶ್ ನಾರಾಯಣ ಜೆಡ್ಡು ಅವರು ಸಂವಿದಾನದ ಮೂಲ ಆಶಯ ಮತ್ತು ಪ್ರಸ್ತುತತೆ ಬಗ್ಗೆ ವಿದ್ಯಾರ್ಥಿಗಳ ಜೊತೆ ಸಂವಾದ ಕಾರ್ಯಕ್ರಮ ನಡೆಸಿದರು.

ಸಂವಿಧಾನದ ಪ್ರಸ್ತಾವನೆಯ ಆಶಯ ಮತ್ತು ಸಂವಿಧಾನ ನಮಗೆ ನೀಡಿದ ಹಕ್ಕುಗಳನ್ನು ಪ್ರಸ್ತುತ ಸಮಾಜ ತಮಗೆ ಬೇಕಾದಂತೆ ಹೇಗೆ ಉಪಯೋಗಿಸುತ್ತದೆ ಮತ್ತು ಸಂವಿದಾನವು ಪ್ರತಿಯೊಬ್ಬ ವ್ಯಕ್ತಿಗೆ ನೀಡಿದ ಕರ್ತವ್ಯಗಳೇನು ಮತ್ತು ಅದನ್ನು ಪ್ರಸ್ತುತ ಸಮಾಜ ಕರ್ತವ್ಯಗಳನ್ನು ಹೇಗೆ ನಿರ್ವಹಿಸುತ್ತಿದೆ ಎಂಬ ಬಗ್ಗೆ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. ಯುವ ಜನಾಂಗ ಜಾಗ್ರತಗೊಂಡಲ್ಲಿ ಮಾತ್ರ ಸಂವಿಧಾನದ ಮೂಲ ಆಶಯ ಉಳಿಯಲು ಸಾಧ್ಯ ಎಂಬ ಕಿವಿಮಾತನ್ನು ಯುವ ವಿದ್ಯಾರ್ಥಿಗಳಿಗೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಕಾಶಚಂದ್ರ. ಬಿ ಅವರು ವಹಿಸಿದ್ದರು. ಕಾಲೇಜಿನ ಭೋದಕ ಮತ್ತು ಭೋದಕೇತರ ವ್ರoದ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅತಿಥಿಗಳನ್ನು ಡಾ. ಸತೀಶ್ ಗಟ್ಟಿ ಸ್ವಾಗತಿಸಿದರು. ಪ್ರೊ. ಹೈದರ್ ಅಲಿ ಧನ್ಯವಾದ ಸಮರ್ಪಿಸಿದರು. ಕುಮಾರಿ ಅಶ್ವಿತಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here