ಬಂಟ್ವಾಳ: ಜನರ ಬಳಿಗೆ ಜನಪ್ರತಿನಿಧಿಗಳು ಹಾಗೂ ಎಲ್ಲಾ ಇಲಾಖೆಯ ಸರಕಾರಿ ಅಧಿಕಾರಿಗಳು ಬಂದು ಸಮಸ್ಯೆಗಳ ಪರಿಹಾರಕ್ಕೆ ಕ್ರಮಕೈಗೊಳ್ಳಲು ಆಯೋಜನೆ ಮಾಡಿದ ವಿಶಿಷ್ಟ ಕಾರ್ಯಕ್ರಮ ಜನಸ್ಪಂದನವಾಗಿದ್ದು, ಗ್ರಾಮದ ಜನತೆ ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.
ಅವರು ಪೊಳಲಿ ದೇವಸ್ಥಾನದ ಮುಂಭಾಗದ ಸರ್ವಮಂಗಲ ಸಭಾ ಭವನದಲ್ಲಿ ನಡೆದ ಸಜೀಪ ಮುನ್ನೂರು ಜಿ.ಪಂ.ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾನೂನು ಸಮಸ್ಯೆ ಯಿಂದ ಇಲಾಖೆಗಳಲ್ಲಿ ವಿಲೇವಾರಿ ಆಗದೆ ಉಳಿದಿರುವ ಕಡತಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಜನರ ಬಳಿಗೆ ಅಧಿಕಾರಿಗಳನ್ನು ಕರೆಸಲಾಗಿದೆ.
ವಿಳಂಬ ಮಾಡದೆ ಜನರ ಸಮಸ್ಯೆ ಗಳ ಪರಿಹಾರಕ್ಕೆ ಕ್ರಮಕೈಗೊಳ್ಳಿ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮ ದಲ್ಲಿ ಒಟ್ಟು 362 ಮಂದಿ ಫಲಾನುಭವಿಗಳಿಗೆ ವಿವಿಧ ಇಲಾಖೆಯ ಸವಲತ್ತುಗಳನ್ನು ವಿತರಿಸಲಾಯಿತು.
ತಹಶಿಲ್ದಾರ್ ಸ್ಮಿತಾರಾಮು ಮಾತನಾಡಿ, ಜನರ ಸಮಸ್ಯೆ ಗಳನ್ನು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ಮುಕ್ತವಾಗಿ ಚರ್ಚಿಸಿ ಸೂಕ್ತವಾದ ರೀತಿಯಲ್ಲಿ ಸ್ಪಂದನೆ ನೀಡಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.
ಕರಿಯಂಗಳ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಪಲ್ಲಿಪಾಡಿ,ಮಾತನಾಡಿ ಸರಕಾರಕ್ಕೆ ಜನಸಾಮಾನ್ಯರ ನಡುವಿನ ಬಾಂಧವ್ಯದ ಕೊಂಡಿಯಾಗಿ ಜನಸ್ಪಂದನಾ ಕಾರ್ಯಕ್ರಮ ಉತ್ತಮ ಕಾರ್ಯಕ್ರಮ ವಾಗಿದೆ ಎಂದು ಅವರು ಹೇಳಿದರು.
ಇಂತಹ ಕಾರ್ಯಕ್ರಮ ವರ್ಷಕ್ಕೆ ಒಂದು ಬಾರಿಯಾದರೂ ಆಗಲಿ ಎಂದು ಅವರು ಹೇಳಿದರು.
ಅಮ್ಮುಂಜೆ ಗ್ರಾ.ಪಂ.ಅಧ್ಯಕ್ಷ ವಾಮನ ಆಚಾರ್ಯ, ಅಮ್ಟಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ ನಾಯ್ಕ್, ಬಡಗಬೆಳ್ಳೂರು ಗ್ರಾ.ಪಂ.ಅಧ್ಯಕ್ಷ ಪ್ರಕಾಶ್,ಕಳ್ಳಿಗೆ ಗ್ರಾಮಪಂಚಾಯತ್ ಅಧ್ಯಕ್ಷೆ ಯಶೋಧ,
ತಾಲೂಕು ಆರೋಗ್ಯ ಅಧಿಕಾರಿ ಡಾ! ಅಶೋಕ್, ಜಿ.ಪಂ.ಇಂಜಿನಿಯರ್ ತಾರಾನಾಥ, ಕೆ.ಎಸ್‌ಆರ್.ಟಿ.ಸಿ ಡಿಪೋ ಮ್ಯಾನೇಜರ್ ಶ್ರೀಸ ಭಟ್, ಪಿಡಬ್ಲೂ ಡಿ ಇಂಜಿನಿಯರ್ ಜಯಪ್ರಕಾಶ್, ಬಂಟ್ವಾಳ ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್, ಗ್ರಾಮಾಂತರ ಅಪರಾದ ವಿಭಾಗದ ಎಸ್‌ಐ.ಸಂಜೀವ, ಮೆಸ್ಕಾಂ ಇಲಾಖೆಯ ಅಧಿಕಾರಿ ನಾರಾಯಣ ಭಟ್, ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಬಿಂದಿಯಾ, ಕೃಷಿ ಇಲಾಖಾ ಅಧಿಕಾರಿ ತೋಟಗಾರಿಕಾ ಇಲಾಖೆಯ ಅಧಿಕಾರಿ ಪ್ರದೀಪ್ ಡಿ.ಸೋಜ, ಕಾರ್ಮಿಕ ಇಲಾಖೆಯ ಅಧಿಕಾರಿ ಮರ್ಲಿನ್ ಡಿ.ಸೋಜ,
ಪಿ.ಡಿ.ಒಮಾಲಿನಿ, ಎಸಿಡಿಪಿಒ ಶೀಲಾವತಿ, ಕೃಷಿ ಅಧಿಕಾರಿ ವೀಣಾ, ಹಾಗೂ ತಾ.ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು .