ಗೋಹತ್ಯೆ ನಿಷೇಧ ಪ್ರತಿಬಂಧಕ ನಿಷೇದಾಜ್ಞೆ ಕಾನೂನನ್ನು ಸರಿಯಾಗಿ ಪಾಲನೆ ಮಾಡುವಂತೆ ಪೊಲೀಸ್ ಅಧಿಕಾರಿಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಸೂಚನೆ

0

ವಿಟ್ಲ: ರಾಜ್ಯ ಸರಕಾರ ಗೋಹತ್ಯೆ ನಿಷೇಧ ಪ್ರತಿಬಂಧಕ ನಿಷೇದಾಜ್ಞೆ ಕಾನೂನು ಜಾರಿ ಮಾಡಿದ್ದು, ಆಸ್ತಿ ಮುಟ್ಟುಗೋಲು ಸಹಿತ ಸರಕಾರ ಜಾರಿ ಮಾಡಿದ ಕಾನೂನು ಸರಿಯಾಗಿ ಪಾಲನೆ ಮಾಡಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಬಿಸಿರೋಡಿನ ಶಾಸಕರ ಕಚೇರಿಯಲ್ಲಿ ಜು.21ರಂದು ಕಾನೂನು ಸುವ್ಯವಸ್ಥೆಯ ಹಿನ್ನೆಲೆಯಲ್ಲಿ ಕರೆದ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಿದರು.
ತಾಲೂಕಿನಲ್ಲಿ ಅಕ್ರಮ ಚಟುವಟಿಕೆಗಳು, ಕ್ರಿಮಿನಲ್ ಚಟುವಟಿಕೆಗಳು ನಡೆಯದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಅವರು ಸೂಚಿಸಿದರು. ತಾಲೂಕಿನಲ್ಲಿ ಅಕ್ರಮ ಗೋ ಸಾಗಟ, ಗಾಂಜಾ ಸಾಗಾಟ, ಗಾಂಜ ಸೇವನೆ ಹೀಗೆ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡಬಾರದು ಎಂದ ಅವರು, ಕೇರಳ ಗಡಿ ಭಾಗದಲ್ಲಿ ಪೋಲೀಸರು ಹೆಚ್ಚಿನ ನಿಗಾವಹಿಸಿ ಕಾನೂನು ಸುವ್ಯವಸ್ಥೆ ಕಾಪಾಡಲು ಅವರು ಸೂಚಿಸಿದರು.
ಸಭೆಯಲ್ಲಿ ಬಂಟ್ವಾಳ ಡಿ.ವೈ.ಎಸ್.ಪಿ.ಪ್ರತಾಪ್ ಥೊರಾಟ್, ವಿಟ್ಲ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಎಚ್.ಇ., ಬಂಟ್ವಾಳ ನಗರ ಠಾಣಾ ಎಸ್. ಐ.ಅವಿನಾಶ್, ಗ್ರಾಮಾಂತರ ಠಾಣಾ ಎಸ್. ಐ.ಹರೀಶ್, ಪುಂಜಾಲಕಟ್ಟೆ ಎಸ್. ಐ.ಸುತೇಶ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here