ಬಂಟ್ವಾಳ: ನೃತ್ಯಧಾರಾ, ಕಲಾನಯನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

0

ಬಂಟ್ವಾಳ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದೊಂದಿಗೆ ಶ್ರೀದೇವಿ ನೃತ್ಯಾರಾಧನಾ ಕಲಾಕೇಂದ್ರ ಪುತ್ತೂರು ಅವರಿಂದ ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ನೃತ್ಯಧಾರಾ ಮತ್ತು ಕಲಾನಯನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.  ಹಿರಿಯ ಕಲಾವಿದ ಕೆ.ಗೋವಿಂದ ಭಟ್ ಸೂರಿಕುಮೇರು ದೀಪ ಪ್ರಜ್ವಲನ ಮಾಡಿದರು.

ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ರಸಿಕಾರತ್ನ ದಿವಂಗತ.ನಯನ ಕುಮಾರ್ ನೆನಪಿಗಾಗಿ ನೀಡುತ್ತಿರುವ ಕಲಾನಯನ ಪ್ರಶಸ್ತಿಯನ್ನು ಈ ಬಾರಿ ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯ ಕಲಾವಿದ ಕೆ.ಗೋವಿಂದ ಭಟ್ ಸೂರಿಕುಮೇರು ಅವರಿಗೆ ನೀಡಲಾಯಿತು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಮ್ಮ ಕುಡ್ಲ ಚಾನೆಲ್ ನಿರ್ದೇಶಕ ಲೀಲಾಕ್ಷ ಬಿ.ಕರ್ಕೇರ, ಬಿಜೆಪಿ ರಾಜ್ಯ ಮಾಧ್ಯಮ ಸಮಿತಿ ಅಧ್ಯಕ್ಷ ಶ್ರೀರತನ್ ರಮೇಶ್ ಪೂಜಾರಿ ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ಬಾಲಕೃಷ್ಣ ಪ್ರಭು ಉಪಸ್ಥಿತರಿದ್ದರು. ವಿದುಷಿ ರೋಹಿಣಿ ಉದಯ್ ಪ್ರಾಸ್ತಾವಿಕವಾಗಿ ಮಾತಾಡಿದರು. ಸಂಚಾಲಕ ಉದಯ ವೆಂಕಟೇಶ್ ಭಟ್ ಸ್ವಾಗತಿಸಿ ವಂದಿಸಿದರು. V.j ಮನೋಜ್ ವಾಮಂಜೂರು ಕಾರ್ಯಕ್ರಮ ನಿರೂಪಣೆ ನಡೆಸಿ ಕೊಟ್ಟರು.

ಸಭಾ ಕಲಾಪದ ನಂತರ ಅಂತಾರಾಷ್ಟ್ರೀಯ ಭರತನಾಟ್ಯ ಕಲಾವಿದ ವಿದ್ವಾನ್ ಸುಜಯ್ ಶ್ಯಾನಭೋಗ್ ಅವರಿಂದ ರಂಗ್ ನೃತ್ಯ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here